Karnataka news paper

ಶಾರ್ಟ್‌ ಸರ್ಕ್ಯೂಟ್‌ ಉಂಟಾಗಿ ಬಿಎಂಟಿಸಿ ಬಸ್‌ ಸೇರಿ ಎರಡು ವಾಹನಗಳು ಬೆಂಕಿಗಾಹುತಿ!


ಬೆಂಗಳೂರು: ಎರಡು ಪ್ರತ್ಯೇಕ ಘಟನೆಗಳಲ್ಲಿ ಬಿಎಂಟಿಸಿ ಬಸ್‌ ಸೇರಿ ಎರಡು ವಾಹನಗಳು ಬ್ಯಾಟರಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲ ಹೊತ್ತು ಆತಂಕಕಾರಿ ವಾತಾವರಣ ಸೃಷ್ಟಿಸಿದ ಘಟನೆ ಚಾಮರಾಜಪೇಟೆಯ ಮಕ್ಕಳ ಕೂಟ ಬಳಿ ಬೆಳಗ್ಗೆ ನಡೆದಿದೆ. ಮೆಜೆಸ್ಟಿಕ್‌ನಿಂದ ಚಾಮರಾಜ ಪೇಟೆಯ ಕಡೆ ಹೋಗುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಬೆಳಗ್ಗೆ 11.30ರ ಸುಮಾರಿಗೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಚಾಲಕ ಮತ್ತು ನಿರ್ವಾಹಕ ಬಸ್‌ನಲ್ಲಿದ್ದ 40 ಮಂದಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ನಂತರ ನೋಡ ನೋಡುತ್ತಿದ್ದಂತೆ ಬಸ್‌ ಧಗ ಧಗನೆ ಹೊತ್ತಿ ಉರಿದಿದೆ. ಪರಿಣಾಮ ಬಸ್‌ ಶೇ.70ರಷ್ಟು ಸುಟ್ಟು ಹೋಗಿದೆ.
ಬೆಂಗಳೂರು: ರಿಲಯನ್ಸ್‌ ಮಾರ್ಟ್‌ ಮಳಿಗೆಯಲ್ಲಿ ಭಾರಿ ಅಗ್ನಿ ಅವಘಡ
ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್‌ ಸಾವು- ನೋವು ಸಂಭವಿಸಿಲ್ಲ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ವಿ.ವಿ.ಪುರಂ ಪೊಲೀಸರು ದೌಡಾಯಿಸಿ ಪರಿಶೀಲಿಸಿದರು. ಚಾಲಕನ ಪ್ರಕಾರ ಬ್ಯಾಟರಿಯ ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದರು.

ಟಾಟಾ ಏಸ್‌ ವಾಹನಕ್ಕೆ ಬೆಂಕಿ
ರಸ್ತೆ ಬದಿ ನಿಲ್ಲಿಸಿದ್ದ ಟಾಟಾ ಏಸ್‌ ವಾಹನದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಸಂಪಿಗೆಹಳ್ಳಿ ಠಾಣೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.

ಥಣಿಸಂದ್ರ ಸಮೀಪದ ಅಮರ ಜ್ಯೋತಿ ನಗರದ ಸರಕಾರಿ ಶಾಲೆ ಹಿಂಭಾಗದ ರಸ್ತೆಯಲ್ಲಿ ಇಮ್ರಾನ್‌ ಎಂಬುವವರು ಗುರುವಾರ ರಾತ್ರಿ ತಮ್ಮ ಟಾಟಾ ಏಸ್‌ ವಾಹನ ನಿಲ್ಲಿಸಿ ಹೋಗಿದ್ದರು. ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ವಾಹನದ ಬ್ಯಾಟರಿಯಲ್ಲಿ ಉಂಟಾದ ಕಿಡಿಯಿಂದ ಶಾರ್ಟ್‌ ಸರ್ಕ್ಯೂಟ್‌ ಉಂಟಾಗಿ ಇಡೀ ವಾಹನ ಸುಟ್ಟು ಕರಕಲಾಗಿದೆ ಎನ್ನಲಾಗಿದೆ. ಘಟನೆ ಸಂಬಂಧ ಇಮ್ರಾನ್‌ ದೂರು ನೀಡಿದ್ದಾರೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಮೇಲ್ನೋಟಕ್ಕೆ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ ಎಂದು ಪೊಲೀಸರು ಹೇಳಿದರು. ಸಂಪಿಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Read more

[wpas_products keywords=”deal of the day sale today offer all”]