Karnataka news paper

2ನೇ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ


Online Desk

ಪಾರ್ಲ್: ಅತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಪಾರ್ಲ್ ನ ಬೊಲ್ಯಾಂಡ್ ಪಾರ್ಕ್ ನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯ ಟೀಂ ಇಂಡಿಯಾ ಪಾಲಿಗೆ ಮಹತ್ವದ್ದಾಗಿದ್ದು, ಸರಣಿ ಜೀವಂತವಾಗಿರಿಸಿಕೊಳ್ಳಲು ಮೊದಲ ಪಂದ್ಯ ಸೋತು 1-0 ಅಂತರದ ಹಿನ್ನಡೆ ಅನುಭವಿಸಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲಲೇಬೇಕಾದ  ಅನಿವಾರ್ಯತೆ ಇದೆ. 

ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ ಆಫ್ರಿಕಾ ತಂಡದಲ್ಲಿ ಜಾನ್ಸೆನ್ ಪರವಾಗಿ ಸಿಸಂಡಾ ಕಣಕ್ಕಿಳಿಯುತ್ತಿದ್ದಾರೆ.





Read more…

[wpas_products keywords=”deal of the day sports items”]