ಹೈಲೈಟ್ಸ್:
- ನವೀಕೃತ ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಲೋಕಾರ್ಪಣೆಗೆ ಕ್ಷಣಗಣನೆ
- ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಲಿದ್ದಾರೆ
- ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶಾಲೆ
ಸಚಿವ ಡಾ.ನಾರಾಯಣಗೌಡ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಇಲಾಖೆ ಬಗ್ಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಜಕ್ಕೂರು ವೈಮಾನಿಕ ತರಬೇತಿ ಶಾಲೆ ತಮ್ಮ ಇಲಾಖೆ ವ್ಯಾಪ್ತಿಗೆ ಬರಲಿದ್ದು, ನಾನಾ ಕಾರಣಗಳಿಂದಾಗಿ ನಾಲ್ಕೈದು ವರ್ಷದಿಂದ ಸ್ಥಗಿತಗೊಂಡಿರುವುದು ಗಮನಕ್ಕೆ ಬಂತು. ಈ ವಿಚಾರ ತಿಳಿಯುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಸಚಿವ ಡಾ.ನಾರಾಯಣಗೌಡ ಅವರು, ಕೂಡಲೇ ಜಕ್ಕೂರು ವೈಮಾನಿಕ ತರಬೇತಿ ಶಾಲೆ ಆರಂಭಕ್ಕೆ ಅಗತ್ಯ ಕ್ರಮ ಜರುಗಿಸುವಂತೆ ಸೂಚಿಸಿದ್ದರು.
ಕರ್ನಾಟಕಕ್ಕೆ ನಾಲ್ಕು ಎನ್‍ಎಸ್‍ಎಸ್ ರಾಷ್ಟ್ರೀಯ ಪ್ರಶಸ್ತಿ, ಡಾ. ನಾರಾಯಣಗೌಡ ಅಭಿನಂದನೆ
ಅಲ್ಲದೇ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶಾಲೆಯನ್ನು ಪುನಾರಂಭಗೊಳಿಸಿ, ಪೈಲಟ್‌ಗಳಿಗೆ ತರಬೇತಿ ನೀಡುವ ಕಾರ್ಯ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಜಕ್ಕೂರು ವೈಮಾನಿಕ ತರಬೇತಿ ಶಾಲೆಯಲ್ಲಿದ್ದ ವಿಮಾನಗಳ ದುರಸ್ಥಿ, ರನ್ ವೇ ಕಾಮಗಾರಿ ಸೇರಿದಂತೆ ಪುನಾರಂಭಕ್ಕೆ ಅಗತ್ಯವಿರುವ ಎಲ್ಲಾ ವ್ಯವಸ್ಥೆ ಕೈಗೊಳ್ಳುವಂತೆ ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು. ಸಚಿವರೇ ಖುದ್ದು ಆಸಕ್ತಿವಹಿಸಿ ಪ್ರತಿಯೊಂದು ಅಂಶವನ್ನು ಪರಿಶೀಲಿಸಿ, ಅದರ ಪ್ರಗತಿ ಬಗ್ಗೆ ವರದಿ ಪಡೆಯುತ್ತಿದ್ದರು.
ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ, ಕೇವಲ 6 ತಿಂಗಳೊಳಗೆ ಎಲ್ಲಾ ಪ್ರಕ್ರಿಯೆ ಪೂರ್ಣಗೊಂಡು ನಾಳೆ ಲೋಕಾರ್ಪಣೆಗೊಳ್ಳುತ್ತಿರುವುದು ವಿಶೇಷ. ಇದರ ಜೊತೆಗೆ ಹೆಲಿ ಟೂರಿಸಂಗೆ ಚಾಲನೆ, ಲಾಂಜ್ ಹಾಗೂ 10 ಕೋಟಿ ವೆಚ್ಚದಲ್ಲಿ ಮೂಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ. ಇದೇ ವೇಳೆ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದ ಪ್ರಯುಕ್ತ 75 ನೇತಾಜಿ ಅಮೃತ ಎನ್‌ಸಿಸಿ ಶಾಲೆಗಳನ್ನು ಮುಖ್ಯಮಂತ್ರಿಗಳು ಘೋಷಣೆ ಮಾಡಲಿದ್ದಾರೆ.
ಎರಡು ಕೋಟಿ ವೆಚ್ಚದಲ್ಲಿ ರನ್ ವೇ ನಿರ್ಮಾಣ, ಹೊಸದಾಗಿ ಟ್ವಿನ್ ಎಂಜಿನ್ ಸೇರ್ಪಡೆ
ಎರಡು ಕೋಟಿ ವೆಚ್ಚದಲ್ಲಿ 874 ಮೀಟರ್ ರನ್ ವೇ ಉನ್ನತಿಕರಿಸಲಾಗಿದೆ. ಶಾಲೆಯಲ್ಲಿದ್ದ ಐದು ಸಿಂಗಲ್ ಎಂಜಿನ್ ವಿಮಾನಗಳನ್ನು ದುರಸ್ಥಿಗೊಳಿಸಿ, ತರಬೇತಿಗೆ ಸಿದ್ದಪಡಿಸಲಾಗಿದೆ. ಅಲ್ಲದೇ, 5 ಕೋಟಿ ವೆಚ್ಚದಲ್ಲಿ ಟ್ವಿನ್ ಎಂಜಿನ್ ಖರೀದಿಸಲಾಗಿದೆ. ಇದರಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಆಗಲಿದೆ.
ಮುಂದಿನ ವಾರದಿಂದ ತರಬೇತಿ ಆರಂಭ
ಜಕ್ಕೂರು ವೈಮಾನಿಕ ಶಾಲೆಯಲ್ಲಿ ತರಬೇತಿ ಪಡೆಯಲು ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಜಕ್ಕೂರು ವೈಮಾನಿಕ ತರಬೇತಿ ಶಾಲೆಯಲ್ಲಿ ಈಗಾಗಲೇ 40 ವಿದ್ಯಾರ್ಥಿಗಳಿದ್ದು, ಹೊಸ ಬ್ಯಾಚ್‌ಗೆ 35 ಅರ್ಜಿಗಳು ಬಂದಿವೆ. ಮುಂದಿನ ವಾರದಿಂದ ತರಬೇತಿ ತರಗತಿಗಳು ಆರಂಭವಾಗಲಿವೆ.
Read more
[wpas_products keywords=”deal of the day sale today offer all”]