The New Indian Express
ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಾಬು ಸಿಂಗ್ ಕುಶ್ವಾಹಾ ಮತ್ತು ಭಾರತ್ ಮುಕ್ತಿ ಮೋರ್ಚಾದೊಂದಿಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ಹೆದುಲ್ ಮುಸ್ಲಿಮೀನ್(ಎಐಎಂಐಎಂ) ಮೈತ್ರಿ ಮಾಡಿಕೊಂಡಿರುವುದಾಗಿ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಶನಿವಾರ ಘೋಷಿಸಿದ್ದಾರೆ.
ಈ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಇಬ್ಬರು ಮುಖ್ಯಮಂತ್ರಿಗಳಾಗುತ್ತಾರೆ, ಒಬ್ಬರು ಒಬಿಸಿ ಸಮುದಾಯದವರು ಮತ್ತು ಇನ್ನೊಬ್ಬರು ದಲಿತ ಸಮುದಾಯದವರು ಮುಖ್ಯಮಂತ್ರಿಯಾಗುತ್ತಾರೆ. ಮುಸ್ಲಿಂ ಸಮುದಾಯ ಸೇರಿದಂತೆ ಮೂವರು ಉಪಮುಖ್ಯಮಂತ್ರಿಗಳು ಇರುತ್ತಾರೆ ಎಂದು ಓವೈಸಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ: ಉತ್ತರ ಪ್ರದೇಶ: ಎಲ್ಲಾ ಕಡೆ ನನ್ನ ಮುಖ ತಾನೇ ಕಾಣ್ತಿದೆ; ಸಿಎಂ ಅಭ್ಯರ್ಥಿ ತಾನೇ ಎಂಬ ಸುಳಿವು ಕೊಟ್ಟರಾ ಪ್ರಿಯಾಂಕಾ!
ಇದು ಬಲವಂತದಿಂದ ರಚನೆಯಾದ ಮೈತ್ರಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಬಾಬು ಸಿಂಗ್ ಕುಶ್ವಾಹಾ ಅವರು, ಇದು ಬಲವಂತದ ಮೈತ್ರಿ ಅಲ್ಲ. ನಾವು ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕಾಗಿ ದೀರ್ಘಕಾಲ ಕೆಲಸ ಮಾಡಿದ್ದೇವೆ ಎಂದು ಹೇಳಿದರು.
ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.
Read more
[wpas_products keywords=”deal of the day”]