The New Indian Express
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ ನ್ಯಾನೊ ಉಪಗ್ರಹವೊಂದನ್ನು ವಿನ್ಯಾಸಗೊಳಿಸಿ, ಉಡಾಯಿಸುವ ಯೋಜನೆಗೆ ಅನುದಾನ ಬಿಡುಗಡೆ ಮಾಡಲು ಸರ್ಕಾರ ಶುಕ್ರವಾರ ಒಪ್ಪಿಗೆ ನೀಡಿದೆ.
ಈ ಕುರಿತು ಮಾಹಿತಿ ನೀಡಿರುವ ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು, ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಅಂಗವಾಗಿ ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ ನ್ಯಾನೊ ಉಪಗ್ರಹವೊಂದನ್ನು ವಿನ್ಯಾಸಗೊಳಿಸಿ, ಉಡಾಯಿಸುವ ಯೋಜನೆಗೆ 1.90 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕುಗ್ರಾಮಗಳಿಗೂ ಉತ್ತಮ ಇಂಟರ್ನೆಟ್ ಸೇವೆ ಒದಗಿಸಲು ಉಪಗ್ರಹ ಸೇವೆ ಬಳಸಲು ಸರ್ಕಾರ ಬದ್ಧ: ಡಾ. ಸಿ ಎನ್ ಅಶ್ವಥ ನಾರಾಯಣ
“ಕರ್ನಾಟಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಉಪಗ್ರಹ- ಕೆಜಿಎಸ್ 3 ಸ್ಯಾಟ್ (Karnataka Government School Students Satellite- KGS3Sat)ಎಂಬ ಹೆಸರಿನ ಯೋಜನೆಯನ್ನು ಇಸ್ರೋ ಮತ್ತು ಭಾರತೀಯ ತಂತ್ರಜ್ಞಾನ ಕಾಂಗ್ರೆಸ್ ಅಸೋಸಿಯೇಷನ್ (ಐಟಿಸಿಎ) ಸಹಯೋಗದೊಂದಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಚಾರ ಸೊಸೈಟಿ (ಕೆಎಸ್‌ಟಿಇಪಿಎಸ್) ಮೂಲಕ ಜಾರಿಗೊಳಿಸಲಾಗುವುದು. ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಚಾರ ಸೊಸೈಟಿ, ಇಸ್ರೋ ಮತ್ತು ಭಾರತೀಯ ತಂತ್ರಜ್ಞಾನ ಕಾಂಗ್ರೆಸ್ ಅಸೋಸಿಯೇಷನ್ ನೊಂದಿಗೆ ಎಂಒಯುಗೆ ಪ್ರವೇಶಿಸಲಿದೆ.
ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಉತ್ತೇಜಿಸುವುದು ಈ ಯೋಜನೆಯ ಉದ್ದೇಶವಾಗಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಇದರ ಅಂಗವಾಗಿ ಬೆಂಗಳೂರಿನ ಆಯ್ದ ಒಂದು ಸರ್ಕಾರಿ ಶಾಲೆಯಿಂದ ಪ್ರಾಯೋಗಿಕವಾಗಿ ನ್ಯಾನೊ ಉಪಗ್ರಹವನ್ನು ವಿನ್ಯಾಸಗೊಳಿಸಿ, ಉಡಾವಣೆ ಮಾಡಲಾಗುತ್ತದೆ.
ಇದನ್ನೂ ಓದಿ: ಮುಂದಿನ 5 ವರ್ಷಗಳಲ್ಲಿ ಕರ್ನಾಟಕ ಐಟಿ ವಲಯದಲ್ಲಿ 60 ಲಕ್ಷದಷ್ಟು ಉದ್ಯೋಗ ಸೃಷ್ಟಿ: ಐಟಿ-ಬಿಟಿ ಸಚಿವ ಡಾ. ಅಶ್ವಥ್ ನಾರಾಯಣ
ಯೋಜನೆಯನ್ನು ಪೂರ್ಣಗೊಳಿಸಲು 12 ತಿಂಗಳ ಕಾಲಾವಕಾಶ ನೀಡಲಾಗಿದ್ದು, ಅದರ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ತಾಂತ್ರಿಕ ತಜ್ಞರ ಸಮಿತಿಯನ್ನು ಸ್ಥಾಪಿಸಲಾಗುವುದು. 75 ವರ್ಷಗಳ ಸ್ವಾತಂತ್ರ್ಯೋತ್ಸವದ ಅಂಗವಾಗಿ ಉಡಾವಣೆಯಾಗಲಿರುವ 75 ನ್ಯಾನೊ ಉಪಗ್ರಹಗಳಲ್ಲಿ ಇದೂ ಕೂಡ ಒಂದಾಗಲಿದೆ ಎಂದು ತಿಳಿಸಿದ್ದಾರೆ.
ಯೋಜನೆಯ ಭಾಗವಾಗಿ 75 ನ್ಯಾನೊ-ಉಪಗ್ರಹಗಳನ್ನು ವಿನ್ಯಾಸಗೊಳಿಸಲು ಮತ್ತು ಉಡಾವಣೆ ಮಾಡಲು ಅರ್ಜಿ ಸಲ್ಲಿಸುವಂತೆ ಈ ಹಿಂದೆಯೇ ದೇಶದಾದ್ಯಂತ ಹಲವಾರು ವಿದ್ಯಾರ್ಥಿ ಸಮೂಹಗಳಿಗೆ ಆಹ್ವಾನ ನೀಡಲಾಗಿತ್ತು.
Read more
[wpas_products keywords=”deal of the day”]