Online Desk
ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವ ಬಗ್ಗೆ ಸುಳಿವು ನೀಡಿದ್ದಾರೆ.
ಉತ್ತರಪ್ರದೇಶದಲ್ಲಿ ನೀವೂ ಎಲ್ಲಾದರೂ ಕಾಂಗ್ರೆಸ್ ಪಕ್ಷವನ್ನು ನೋಡಿದ್ದೀರಾ? ಆದರೆ ನೀವು ಎಲ್ಲೆಡೆ ನನ್ನ ಮುಖವನ್ನು ನೋಡಬಹುದು ಎಂದು ಹೇಳುವ ಮೂಲಕ ಮುಂದಿನ ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗುವ ಕುರುಹನ್ನು ಬಿಟ್ಟುಕೊಟ್ಟಿದ್ದಾರೆ.
ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ 40% ಟಿಕೆಟ್ ಗಳನ್ನು ಮಹಿಳೆಯರಿಗೆ ನೀಡುವುದಾಗಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದರು. ಜೊತೆಗೆ ಸಿಎಂ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದಿಂದ ಮಹಿಳೆಯೊಬ್ಬರನ್ನು ನಾಮನಿರ್ದೇಶನ ಮಾಡಬಹುದು ಎಂಬ ಊಹಾಪೋಹಕ್ಕೂ ಕಾರಣವಾಗಿತ್ತು.
ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ಯುವ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್, ಪ್ರಿಯಾಂಕಾ
ಕಾಂಗ್ರೆಸ್ ಈ ವರ್ಷ ಯುಪಿಯಲ್ಲಿ ಮಹಿಳಾ ಸಮಸ್ಯೆಗಳನ್ನು ಚುನಾವಣಾ ಯೋಜನೆಯಾಗಿ ತೆಗೆದುಕೊಂಡಿದೆ. ಪ್ರಾಥಮಿಕವಾಗಿ ಮಹಿಳಾ ಕೇಂದ್ರಿತ ಯೋಜನೆಗಳ ಸುತ್ತ ಪ್ರಚಾರಗಳು ಆರಂಭವಾಗಿವೆ. ಈ ಹಿಂದೆ ಪ್ರಿಯಾಂಕಾ ಗಾಂಧಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಿವಿಧ ಪ್ರೋತ್ಸಾಹ ಮತ್ತು ಯೋಜನೆಗಳನ್ನು ಪಕ್ಷವು ಭರವಸೆ ನೀಡಿದೆ.
ಯುಪಿಯ ಮಹಿಳಾ ಮತದಾರರನ್ನು ಓಲೈಸುವ ಸಲುವಾಗಿ ಪಕ್ಷವು ‘ಲಡ್ಕಿ ಹೂ, ಲಾಡ್ ಸಕ್ತಿ ಹೂ’, ಬಟನ್ ಡಬಾವೋ, ಸ್ಕೂಟಿ ಪಾವೋ ಎಂಬ ಅಭಿಯಾನವನ್ನು ಪ್ರಾರಂಭಿಸಿತು. ರಾಜ್ಯದಲ್ಲಿ ಫೆಬ್ರವರಿ 10ರಿಂದ ಮಾರ್ಚ್ 7ರ ನಡುವೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.
Read more
[wpas_products keywords=”deal of the day”]