Online Desk
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಇಂದು ಸ್ವಲ್ಪ ಕಡಿಮೆಯಾಗಿದ್ದು ಕಳೆದ 24 ಗಂಟೆಯಲ್ಲಿ 42,470 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 34,67,472ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 26 ಮಂದಿ ಕೊರೋನಾಗೆ ಬಲಿಯಾಗಿದ್ದು ಒಟ್ಟಾರೆ ಸಾವಿನ ಸಂಖ್ಯೆ 38,563ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇಂದು ಸಹ ಪಾಸಿಟಿವ್ ಪ್ರಕರಣಗಳ ಸಂಖ್ಯೆ 42 ಸಾವಿರ ದಾಟುವ ಮೂಲಕ ಪಾಸಿಟಿವ್ ಪ್ರಮಾಣ ಶೇ. 19.33ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಇಂದು 17,266 ಮಂದಿಗೆ ಸೋಂಕು ದೃಢಪಟ್ಟಿದೆ. ಇನ್ನು ಆರು ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು 35,140 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 3,30,447ಕ್ಕೆ ಏರಿಕೆಯಾಗಿದೆ. ಇಂದು ಒಟ್ಟು 2,19,699 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಸುಧಾಕರ್ ಅವರು ಹೇಳಿದ್ದಾರೆ.
ಇಂದಿನ 22/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/l4voEV8c0k @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/YGSD8QJ2eN
— K’taka Health Dept (@DHFWKA) January 22, 2022
Read more
[wpas_products keywords=”deal of the day”]