Source : Online Desk
ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯದಲ್ಲಿ ಸೋಮವಾರ ನಡೆದ ಭದ್ರತಾ ಪಡೆಗಳ ಜೊತೆಗೆ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಉಗ್ರರ ಹತ್ಯೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಂಗ್ರೀತ್ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿರುವುದಾಗಿ ಅವರು ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಶ್ಮೀರ ವಲಯ ಪೊಲೀಸರು, ಇಬ್ಬರು ಅಪರಿಚಿತ ಉಗ್ರರ ಹತ್ಯೆಯಾಗಿದೆ. ಶೋಧ ಕಾರ್ಯ ಮುಂದುವರೆದಿರುವುದಾಗಿ ತಿಳಿಸಿದ್ದಾರೆ.
#SrinagarEncounterUpdate: 02 unidentified #terrorists killed. Search going on. Further details shall follow. @JmuKmrPolice https://t.co/AaSI0CcMyK
— Kashmir Zone Police (@KashmirPolice) December 13, 2021
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಜೈಶ್ ಇ ಮೊಹಮ್ಮದ್ ನಡೆಸಿದ ದಾಳಿಗೆ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾದ ಮರುದಿನವೇ ಈ ಕಾರ್ಯಾಚರಣೆ ನಡೆದಿದೆ.
ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದ ಉಗ್ರರಿಗೆ ಶರಣಾಗಲು ಅವಕಾಶ ನೀಡಲಾಯಿತು. ಆದರೆ, ಅವರು ನಿರಾಕರಿಸಿರುವುದರ ಜೊತೆಗೆ ಮನಬಂದಂತೆ ಗುಂಡು ಹಾರಿಸಿದರು. ಹಾಗಾಗಿ ನಾವು ಪ್ರತಿ ದಾಳಿ ನಡೆಸಿದೆವು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.