ರಾಜ್ಯದ ಏಕೈಕ ಮಹಿಳಾ ವಿವಿಯನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ಎಂ ಬಿ ಪಾಟೀಲ್ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ವಿಜಯಪುರದ ಅಕ್ಕಮಹಾದೇವಿ ವಿಶ್ವ ವಿದ್ಯಾಲಯವನ್ನು ರದ್ದುಗೊಳಿಸುವ ನಿರ್ಧಾರ ಕೈ ಬಿಡಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಪದಾಧಿಕಾರಿಗಳು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್, ವಿವಿಯ ವಿಶ್ರಾಂತ ಉಪಕುಲಪತಿ ಡಾ. ಸಬೀಹಾ, ವಸುಂಧರಾ ಭೂಪತಿ, ಅಕೈ ಪದ್ಮಶಾಲಿ ಮತ್ತಿತರರು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಆದರೆ ಇದೀಗ ಈ ಆರೋಪವನ್ನು ಕಾರಜೋಳ ನಿರಾಕರಣೆ ಮಾಡಿದ್ದಾರೆ.
ರಾಜ್ಯದ ಏಕೈಕ ಮಹಿಳಾ ವಿವಿಯಾಗಿರುವ ಅಕ್ಕಮಹಾದೇವಿ ವಿವಿ ಆರಂಭಗೊಂಡು ಎರಡು ದಶಕವಾದರೂ ನಿಶ್ಚಿತ ಗುರಿ ಸಾಧಿಸುವಲ್ಲಿ ವಿಫಲವಾಗಿದೆ. ಈ ವಿಶ್ವವಿದ್ಯಾಲಯ ಹೆಸರಿಗಷ್ಟೇ ಮಹಿಳಾ ವಿಶ್ವವಿದ್ಯಾಲಯವಾಗಿದೆ ಎಂಬ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಮಹಿಳಾ ವಿಶ್ವವಿದ್ಯಾಲಯವನ್ನು ರದ್ದುಗೊಳಿಸಿ, ಬಾಗಲಕೋಟೆ, ವಿಜಯಪುರ ಅವಳಿ ಜಿಲ್ಲೆಗೆ ಸೀಮಿತವಾಗಿ ಸಾಮಾನ್ಯ ವಿಶ್ವವಿದ್ಯಾಲಯವಾಗಿ ಅಥವಾ ಕ್ಲಸ್ಟರ್ ವಿವಿಯಾಗಿ ಪರಿವರ್ತನೆ ಮಾಡಲು ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿತ್ತು.
Read more
[wpas_products keywords=”deal of the day sale today offer all”]