Karnataka news paper

ಅಕ್ಕಮಹಾದೇವಿ ಮಹಿಳಾ ವಿವಿ ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಗೋವಿಂದ ಕಾರಜೋಳ


ಬೆಂಗಳೂರು: ‘ವಿಜಯಪುರದ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಮಹಿಳಾ ವಿಶ್ವ ವಿದ್ಯಾಲಯವನ್ನು ಮುಚ್ಚಲಾಗುವುದು ಎಂಬ ಸುಳ್ಳು ವದಂತಿಯನ್ನು ಯಾರೂ ಹರಡಬಾರದು. ಇಂಥ ವದಂತಿಗಳಿಗೆ ಕಿವಿಗೊಡಬಾರದು’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ‘ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕ ಆಗುವಂತೆ ಆ ಭಾಗದ ಹೆಣ್ಣು ಮಕ್ಕಳು ಹೆಚ್ಚು, ಹೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ವ್ಯವಸ್ಥೆಯನ್ನು ಉನ್ನತೀಕರಿಸಲು ಮತ್ತು ಆ ಮೂಲಕ ಸುಸಂಸ್ಕೃತ, ಸುಶಿಕ್ಷಿತ ಸಮಾಜವನ್ನು ನಿರ್ಮಿಸಿ ಸ್ವಾವಲಂಬಿ ಮಹಿಳೆಯರನ್ನು ಉತ್ತೇಜಿಸುವ ಉದ್ದೇಶದಿಂದ ಈ ವಿಶ್ವವಿದ್ಯಾಲಯವನ್ನು ಆರಂಭಿಸಲಾಗಿದೆ‘ ಎಂದಿದ್ದಾರೆ.

‘ಈ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಆ ಭಾಗದ ಜನಪ್ರತಿನಿಧಿಯಾಗಿ ಮತ್ತು ಜನಸಮುದಾಯದ ಆಶೋತ್ತರಗಳನ್ನು ಈಡೇರಿಸುವ ಮತ್ತು ಜನರ ಅಪೇಕ್ಷೆ, ನಿರೀಕ್ಷೆಗಳಿಗೆ ತಕ್ಕಂತೆ ಕಾರ್ಯನಿರ್ವಹಿಸುವ ಅಳಿಲುಸೇವೆಯ ಮೂಲಕ ವಿಶ್ವ ವಿದ್ಯಾಲಯದ ಅಭಿವೃದ್ಧಿಗೆ ಕೊಡುಗೆ ನೀಡುವ ಸೌಭಾಗ್ಯ ನನ್ನದಾಗಿದೆ. ಈ ವಿಶ್ವವಿದ್ಯಾಲಯ ಕೇವಲ ಒಂದು ಜಿಲ್ಲೆಯಲ್ಲ, ಹದಿಮೂರು ಜಿಲ್ಲೆಗಳು ಈ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿವೆ’ ಎಂದೂ ತಿಳಿಸಿದ್ದಾರೆ.

‘ಈ ಮಹಿಳಾ ವಿಶ್ವವಿದ್ಯಾಲಯವನ್ನು ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಎಂದು ಮರು ನಾಮಕರಣ ಮಾಡಿ, ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದ ಅಕ್ಕ ಮಹಾದೇವಿಯಗೆ ಗೌರವ ಸಲ್ಲಿಸಿದ ಕೀರ್ತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ’ ಎಂದಿದ್ದಾರೆ.



Read more from source

[wpas_products keywords=”deal of the day sale today kitchen”]