ಬೆಂಗಳೂರು: ‘ಎರಡು ವರ್ಷಗಳ ಅವಧಿಯಲ್ಲಿ ಸಹಕಾರ ಸಚಿವನಾಗಿ ಕೆಲಸ ಮಾಡುವಾಗ ಪಕ್ಷ ಮತ್ತು ಸರ್ಕಾರದಲ್ಲಿ ನನಗೆ ಸಂಪೂರ್ಣ ಸ್ವಾತಂತ್ರ್ಯ ದೊರಕಿದೆ. ಈಗ ಪಕ್ಷಕ್ಕೆ ಮೋಸ ಮಾಡುವುದಿಲ್ಲ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಬಿಜೆಪಿ ಮತ್ತು ಜೆಡಿಎಸ್ನ ಹಲವರು ಕಾಂಗ್ರೆಸ್ ಪಕ್ಷ ಸೇರಲು ಮುಂದಾಗಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಕುರಿತು ಸೋಮವಾರ ಪ್ರತಿಕ್ರಿಯಿಸಿದ ಅವರು, ‘ಪಕ್ಷ ಮತ್ತು ಸರ್ಕಾರದಲ್ಲಿ ನನಗೆ ಸಂಪೂರ್ಣ ಸ್ವಾತಂತ್ರ್ಯ ಇದೆ. ಪಕ್ಷ ಮತ್ತು ಸರ್ಕಾರಕ್ಕೆ ಯಾವತ್ತೂ ಮುಜುಗರ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ’ ಎಂದರು.
ಸಂಪುಟ ವಿಸ್ತರಣೆಗಿಂತ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ: ಸೋಮಣ್ಣ
‘ಇಲ್ಲಿ ತೃಪ್ತಿಯಾಗಿದ್ದೇನೆ. ಇಲ್ಲಿಯೇ ಮುಂದುವರಿಯುತ್ತೇನೆ’ ಎಂದು ಹೇಳಿದರು.
Read more from source
[wpas_products keywords=”deal of the day sale today kitchen”]