Karnataka news paper

ಡಿ. 17ರಿಂದ ತೆರೆಯಲ್ಲಿ ‘ಆನ’


ಸೂಪರ್‌ ಹೀರೋ ಪರಿಕಲ್ಪನೆಯ ‘ಆನ’ ಡಿ. 17ರಂದು ತೆರೆ ಕಾಣಲಿದೆ. ಮಹಿಳಾ ಪ್ರಧಾನ ಸೂಪರ್ ಹೀರೋ ಕಥೆಯ ಚಿತ್ರವಿದು. ಅದಿತಿ ಪ್ರಭುದೇವ ನಾಯಕಿ. ಟ್ರೇಲರ್‌ ಈಗಾಗಲೇ ಬಿಡುಗಡೆಯಾಗಿದೆ. 

ಯು.ಕೆ.ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ಚಿತ್ರ ನಿರ್ಮಾಣ ಮಾಡಿದ್ದಾರೆ. ಮನೋಜ್ ಪಿ. ನಡಲುಮನೆ ನಿರ್ದೇಶಕರು. ಉದಯ್ ಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್ ಅವರ ಸಂಗೀತ ನಿರ್ದೇಶನವಿರುವ ‘ಆನ’ಗೆ ವಿಜೇತ್‌ಚಂದ್ರ ಅವರ ಸಂಕಲನವಿದೆ.

ನಾನು ಈವರೆಗೂ ಈ ರೀತಿಯ ಪಾತ್ರ ಮಾಡಿಲ್ಲ. ನನಗೂ ಚಿತ್ರ ಒಪ್ಪಿಕೊಂಡಾಗ ಸ್ವಲ್ಪ ಭಯವಿತ್ತು. ಹೇಗೆ ಕಾಣುತ್ತೇನೋ ಎಂದು. ಈಗ ಆ ಭಯ ಹೋಗಿದೆ. ಚಿತ್ರ ಗೆಲ್ಲುತ್ತದೆ ಎಂಬ ನಂಬಿಕೆ ಇದೆ ಎನ್ನುತ್ತಾರೆ ನಾಯಕಿ ಅದಿತಿ.

ಸುನಿಲ್ ಪುರಾಣಿಕ್, ಚೇತನ್ ಗಂಧರ್ವ, ರನ್ವಿತ್ ಶಿವಕುಮಾರ್, ವಿಕಾಶ್ ಉತ್ತಯ್ಯ, ಪ್ರೇರಣ ಕಂಬಮ್, ವರುಣ್ ಅಮರಾವತಿ, ಸಮರ್ಥ್ ನರಸಿಂಹರಾಜು, ಕಾರ್ತಿಕ್ ನಾಗಾರಾಜನ್, ಶಿವಮಂಜು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.



Read More…Source link