
ಹೌದು, ರಿಯಲ್‌ಮಿ ಕಂಪೆನಿ ಜಾಗತಿಕ ಮಾರುಕಟ್ಟೆಯಲ್ಲಿ ತನ್ನ ಹೊಸ ರಿಯಲ್‌ಮಿ GT 2 ಸರಣಿಯನ್ನು ಡಿಸೆಂಬರ್ 20ರಂದು ಬಿಡುಗಡೆ ಮಾಡುವುದಾಗಿ ಹೇಳಿದೆ. ಇನ್ನು ಈ ಸರಣಿಯಲ್ಲಿ ರಿಯಲ್‌ಮಿ GT 2 Pro ಸ್ಮಾರ್ಟ್‌ಫೋನ್ ಇರಲಿದೆ ಎನ್ನಲಾಗಿದೆ. ಆದರೆ ಇತರ ರೂಪಾಂತರಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಇದರಲ್ಲಿ ರಿಯಲ್‌ಮಿ GT 2 Pro ಫೋನ್ ಹೊಸದಾಗಿ ಬಿಡುಗಡೆಯಾದ ಸ್ನಾಪ್‌ಡ್ರಾಗನ್ 8 Gen 1 ಪ್ರೊಸೆಸರ್ ಹೊಂದಿರಲಿದೆ ಎನ್ನಲಾಗಿದೆ. ಹಾಗಾದ್ರೆ ರಿಯಲ್‌ಮಿ GT 2 ಸರಣಿ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಇನ್ನು ರಿಯಲ್‌ಮಿ GT 2 Pro ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಒಳಗೊಂಡಿರುವ 6.8 ಇಂಚಿನ WQHD+ OLED ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ. ಜೊತೆಗೆ ಈ ಡಿಸ್‌ಪ್ಲೇ 404 ಪಿಪಿಐ ಸಾಂದ್ರತೆಯನ್ನು ಪಡೆದುಕೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್ ಯಾವುದು?
ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 Gen 1 ಪ್ರೊಸೆಸರ್ ಹೊಂದಿರಲಿದೆ ಎನ್ನಲಾಗಿದ್ದು, ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರುವ ಸಾಧ್ಯತೆಯಿದೆ.

ಕ್ಯಾಮೆರಾ ವಿಶೇಷ
ರಿಯಲ್‌ಮಿ GT 2 Pro ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ GT 2 Pro ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡಿಸೆಂಬರ್ 20 ರಂದು ಮುಂಬರುವ Realme GT 2 ಸರಣಿಯ ಈವೆಂಟ್‌ನಲ್ಲಿ ಬಿಡುಗಡೆಯಾಗಲಿದೆ. ಇದು ಸಂಪೂರ್ಣ ವರ್ಚುವಲ್ ಈವೆಂಟ್ ಆಗಿದ್ದು, ಫೇಸ್‌ಬುಕ್ ಮತ್ತು ಯೂಟ್ಯೂಬ್ ಮೂಲಕ 9 am GMT (2:30 pm IST) ಗೆ ಲೈವ್ ಸ್ಟ್ರೀಮ್ ಆಗಿರುತ್ತದೆ.

ರಿಯಲ್‌ಮಿ ನಾರ್ಜೊ 50A
ಇನ್ನು ರಿಯಲ್‌ಮಿ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ರಿಯಲ್‌ಮಿ ನಾರ್ಜೊ 50A ಮತ್ತು ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿತ್ತು. ಇದರಲ್ಲಿ ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್ 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11. ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು 53 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ.

ರಿಯಲ್‌ಮಿ ನಾರ್ಜೊ 50i
ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್ 6.5-ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಈ ಫೋನ್ 8 ಮೆಗಾಪಿಕ್ಸೆಲ್ AI ರಿಯರ್ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ 5 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 43 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ಹೊಂದಿರಲಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್ ಭಾರತದಲ್ಲಿ 4GB RAM + 64GB ಸ್ಟೋರೇಜ್ ಆಯ್ಕೆಗೆ 11,499ರೂ.ಬೆಲೆ ಹೊಂದಿದೆ. ಇನ್ನು 4GB RAM + 128GB ಸ್ಟೋರೇಜ್ ಆಯ್ಕೆಗೆ 12,499ರೂ ಬೆಲೆ ಹೊಂದಿದೆ. ಇದು ಆಕ್ಸಿಜನ್ ಬ್ಲೂ ಮತ್ತು ಆಕ್ಸಿಜನ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಇನ್ನು ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್ 2GB RAM + 32GB ಸ್ಟೋರೇಜ್ ಆಯ್ಕೆಗೆ 7,499ರೂ ಬೆಲೆಯನ್ನು ಹೊಂದಿದೆ. ಹಾಗೆಯೇ 4GB RAM + 64GB ಸ್ಟೋರೇಜ್ ಆಯ್ಕೆಗೆ 8,499ರೂ.ಬೆಲೆ ಹೊಂದಿದೆ.