The New Indian Express
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಕೇವಲ ಒಂದು ವರ್ಷ ಮಾತ್ರ ಬಾಕಿ ಉಳಿದಿದೆ. ಈ ನಡುವೆ ಕಾಂಗ್ರೆಸ್ ನಾಯಕರು ಗೆಲ್ಲುವ ಕ್ಷೇತ್ರಗಳ ಹುಡುಕಾಟ ನಡೆಸುತ್ತಿದ್ದಾರೆ.
2023 ರಲ್ಲಿ 120 ಸೀಟು ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತ ಪಡಿಸಿದ್ದಾರೆ.
2023 ರ ಚುನಾವಣೆಯಲ್ಲಿ ಸೇಫ್ ಗೇಮ್ ಆಡಲು ನಿರ್ಧರಿಸಿರುವ ನಾಯಕರು, ತಮ್ಮ ಕನಸಿಗೆ ಬೆಂಬಲವಾಗಿರುವ ಸುರಕ್ಷಿತ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದಾರೆ.
2018ರಲ್ಲಿ ಎರಡು ಸ್ಥಾನಗಳಿಂದ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದರು, ಆದರೆ ಬಾದಾಮಿಯಲ್ಲಿಕೇವಲ 1,696 ಮತಗಳ ಅಂತರದಿಂದ ಗೆದ್ದಿದ್ದರು.
ಸತೀಶ್ ಜಾರಕಿಹೊಳಿ ಅವರ ಬಿರುಸಿನ ಪ್ರಚಾರ ಇಲ್ಲದಿದ್ದರೆ, ಬಿಜೆಪಿಯ ಪ್ರಬಲ ನಾಯಕ ಸಮುದಾಯದ ನಾಯಕ ಬಿ. ಶ್ರೀರಾಮುಲು ವಿರುದ್ಧ ಮಾಜಿ ಸಿಎಂ ಸ್ಥಾನ ಗೆಲ್ಲುವುದು ಕಷ್ಟವಾಗಿತ್ತು. ಆದರೆ ಸದ್ಯ ಸತೀಶ್ ಜಾರಕಿಹೊಳಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕವಾಗಿದ್ದು, ಸಿಎಂ ಹುದ್ದೆಗೆ ಅವರ ಹೆಸರು ಕೇಳಿ ಬರುತ್ತಿದೆ, ಈ ಹಿನ್ನೆಲೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಸತೀಶ್ ಯಮನಕರಡಿ ಕ್ಷೇತ್ರದ ಮೇಲೆ ತಮ್ಮ ಗಮನ ಕೇಂದ್ರೀಕರಿಸಲಿದ್ದಾರೆ.
ಇದನ್ನೂ ಓದಿ: ಬಿಜೆಪಿ, ಜೆಡಿಎಸ್ನಿಂದ ಹೆಚ್ಚಿನ ನಾಯಕರು ಕಾಂಗ್ರೆಸ್ ಸೇರಲು ಕಾಯುತ್ತಿದ್ದಾರೆ: ಸಿದ್ದರಾಮಯ್ಯ
ಇದಕ್ಕೂ ಮಿಗಿಲಾಗಿ 2018ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದ ಬಿಬಿ ಚಿಮ್ಮನಕಟ್ಟಿ ಬಾದಾಮಿಯ ಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು, ಸಿದ್ದರಾಮಯ್ಯ ವಾಪಸ್ ಮೈಸೂರಿಗೆ ಹೋಗುವಂತೆ ಸಲಹೆ ನೀಡಿದ್ದರು.
ಇದೇ ವೇಳೆ ಸಿದ್ದರಾಮಯ್ಯ ಕೂಡ ಕುರುಬ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿರುವ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಲು ಯೋಜನೆ ರೂಪಿಸುತ್ತಿದ್ದಾರೆ. ಇದರ ಜೊತೆಗೆ ಜೆಡಿಎಸ್ ನಾಯಕ ಜಿ.ಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆಯಾದರೇ ಒಕ್ಕಲಿಗ ಮತಗಳು ಕೂಡ ತಮಗೆ ಲಭಿಸಲಿವೆ ಎಂಬ ಭರವಸೆಯಲ್ಲಿದ್ದಾರೆ ಸಿದ್ದರಾಮಯ್ಯ.
ಮೇಕೆದಾಟು ಪಾದಯಾತ್ರೆ ದೊಡ್ಡ ಮಟ್ಟದಲ್ಲಿ ನೆರವಾದ ಕಾರಣ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕನಕಪುರ ವಿಧಾನಸಭಾ ಕ್ಷೇತ್ರವನ್ನು ಹಾಗೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಉತ್ತರ ಕರ್ನಾಟಕದ ಸಂಭಾವ್ಯ ಸಿಎಂ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವ ಎಂ ಬಿ ಪಾಟೀಲ್ ಅವರಿಗೆ ಬಬಲೇಶ್ವರ ಕ್ಷೇತ್ರದ ಬಗ್ಗೆ ಯಾವುದೇ ಅಸಮಾಧಾನವಿಲ್ಲ, ಅಲ್ಲಿ ಅವರು ಪ್ರಬಲ ಬೆಂಬಲಿಗರ ದಂಡೇ ಇದೆ.
ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಕೊರಟಗೆರೆಯಲ್ಲಿ ತಮ್ಮ ಮತದಾರರೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ.ಅವರ ಎಸ್ಸಿ ಬಲ ಸಮುದಾಯದ ಮತಗಳು ಎಡ ಸಮುದಾಯಕ್ಕಿಂತ ದೊಡ್ಡದಾಗಿಲ್ಲ. ನಾನು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಯಾರು ಹೇಳಬೇಡಿ. ಇದರಿಂದ ಒಳಸಂಚು ಶುರುವಾಗುತ್ತದೆ ಎಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಬೆಂಬಲಿಗರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು. “ಮುಂದಿನ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್’ ಘೋಷಣೆ ಕೇಳುತ್ತಿದ್ದಂತೆ “ಮುಂದಿನ ಮುಖ್ಯಮಂತ್ರಿ’ ಎಂದು ಹೇಳದಂತೆ ಬೆಂಬಲಿಗರಲ್ಲಿ ಮನವಿ ಮಾಡಿದರು.
Read more
[wpas_products keywords=”deal of the day”]