Karnataka news paper

ಭರ್ಜರಿ ಡಿಸ್ಕೌಂಟ್‌ನಲ್ಲಿ ಐಫೋನ್‌ SE ಖರೀದಿಸಲು ಈ ಕೊಡುಗೆ ಬೆಸ್ಟ್‌!


ಐಫೋನ್‌

ಹೌದು, ಫ್ಲಿಪ್‌ಕಾರ್ಟ್‌ ವೆಬ್‌ಸೈಟ್ ಐಫೋನ್‌ SE ಫೋನಿನ ಬೆಲೆ ಕಡಿತಗೊಳಿಸಿದ್ದು, ಭರ್ಜರಿ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಐಫೋನ್‌ SE ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 34,999ರೂ. ಗಳ ದರದಲ್ಲಿ ಕಾಣಿಸಿಕೊಂಡಿದ್ದು, ಇದರೊಂದಿಗೆ 15,850ರೂ.ಗಳ ವರೆಗೂ ಆಕರ್ಷಕ ಎಕ್ಸ್‌ಚೇಂಜ್ ಕೊಡುಗೆ ಸಹ ನೀಡಿದೆ. ಹೀಗಾಗಿ ಗ್ರಾಹಕರು ಭಾರೀ ಡಿಸ್ಕೌಂಟ್‌ನಲ್ಲಿ ಐಫೋನ್‌ SE ಫೋನ್‌ ಖರೀದಿಸಬಹುದಾಗಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಐಫೋನ್‌ SE ಫೋನ್‌ 64GB ವೇರಿಯಂಟ್ ಹಾಗೂ 128GB ವೇರಿಯಂಟ್ ಈ ಎರಡು ಮಾಡೆಲ್‌ಗಳು ಕೊಡುಗೆಯಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ ಐಫೋನ್‌ SE ಫೋನ್‌ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಆಪಲ್ ಐಫೋನ್ SE 4.7 ಇಂಚಿನ ರೆಟಿನಾ ಎಚ್‌ಡಿ ಮಾದರಿಯ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 750 x 1334 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ವೈಟ್ ಬ್ಯಾಲೆನ್ಸ್ ಹೊಂದಿಸಲು ಟ್ರೂ ಟೋನ್ ಟೆಕ್ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 625 ನಿಟ್‌ಗಳ ಗರಿಷ್ಠ ಬ್ರೈಟ್‌ನೆಶ್‌ ಅನ್ನು ನೀಡಲಿದೆ.

ಪ್ರೊಸೆಸರ್ ಕಾರ್ಯ ವೈಖರಿ

ಪ್ರೊಸೆಸರ್ ಕಾರ್ಯ ವೈಖರಿ

ಐಫೋನ್ SE ಆಪಲ್‌ ಕಂಪೆನಿ A 13 ಬಯೋನಿಕ್ SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಪ್ರೊಸೆಸರ್‌ಗೆ ಪೂರಕವಾಗಿ ಐಒಎಸ್‌ 13 ಬೆಂಬಲ ನೀಡಲಿದೆ. ಇನ್ನು ಈ ಐಫೋನ್ 64GB, 128GB, ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವೇರಿಯೆಂಟ್‌ ಆಯ್ಕೆಯಲ್ಲಿ ಲಬ್ಯವಿದೆ. ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸಲು ಯಾವುದೇ ಅವಕಾಶವನ್ನ ನೀಡಿಲ್ಲ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ಐಫೋನ್ SE ಐಫೋನ್ ರಿಯರ್‌ ಸೆಟ್‌ಅಪ್‌ನಲ್ಲಿ ಸಿಂಗಲ್‌ ಕ್ಯಾಮೆರಾ ಹೊಂದಿದ್ದು, 12 ಮೆಗಾ ಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್ ಒಳಗೊಂಡಿದೆ. ಜೊತೆಗೆ 7 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. 60kps ವರೆಗೆ 4 ಕೆ ವಿಡಿಯೋ ರೆಕಾರ್ಡಿಂಗ್ ಮತ್ತು ಫೋಟೋಗಳಿಗಾಗಿ ಸ್ಮಾರ್ಟ್ HDR ಆಯ್ಕೆ ಪಡೆದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಆಪಲ್‌ ಐಫೋನ್‌SE ಉತ್ತಮ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ 802.11ax, ವೈ-ಫೈ ಕಾಲ್‌, ಎನ್‌ಎಫ್‌ಸಿ, ಬ್ಲೂಟೂತ್ ವಿ 5.0, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಹಾಗೆಯೇ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಬಾರೋಮೀಟರ್, ಮೂರು-ಆಕ್ಸಿಸ್ ಗೈರೊಸ್ಕೋಪ್ ಹೊಂದಿವೆ.

ರೆಸಲ್ಯೂಶನ್

ಹಾಗೆಯೇ ನೂತನ ಐಫೋನ್ 13 ಮಿನಿ ಫೋನ್‌ 5.8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 800nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. 5G ಸಪೋರ್ಟ್‌ ಪಡೆದಿದ್ದು, ಈ ಪ್ರೊಸೆಸರ್ 50% ವೇಗದ ಗ್ರಾಫಿಕ್ಸ್‌ ಸೌಲಭ್ಯ ಪಡೆದಿದೆ. ಐಫೋನ್ 13 ಮಿನಿ ಫೋನ್ ಸಹ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ.



Read more…

[wpas_products keywords=”smartphones under 15000 6gb ram”]