Karnataka news paper

ನಿಮ್ಮ ಜೊತೆ ಯಾರಾದರೂ ಬಂದರೆ ತತ್ವ ಸಿದ್ದಾಂತದ ನಂಬಿಕೆಯಿಂದಲ್ಲ, ಅವಕಾಶವಾದ ಮತ್ತು ಅಧಿಕಾರ ದಾಹಕ್ಕಾಗಿ ಮಾತ್ರ!


Online Desk

ಬೆಂಗಳೂರು: ಹಲವು ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ, ತಮ್ಮ ಸಂಪರ್ಕದಲ್ಲಿರುವ ಒಬ್ಬನೇ ಒಬ್ಬ ಬಿಜೆಪಿ ಶಾಸಕನ ಹೆಸರು ಬಹಿರಂಗ ಪಡಿಸುವಂತೆ ಬಿಜೆಪಿ ಸವಾಲು ಹಾಕಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ , ಸಿದ್ದರಾಮಯ್ಯನವರೇ,  ನಿಮ್ಮ ಜೊತೆ ಯಾರಾದರೂ ಬಂದರೆ ಅದು ತತ್ವ ಸಿದ್ದಾಂತದ ನಂಬಿಕೆಯಿಂದಲ್ಲ. ಅದು ಅವಕಾಶವಾದ ಹಾಗೂ ಅಧಿಕಾರ ದಾಹಕ್ಕಾಗಿ ಮಾತ್ರ, ಕಾಂಗ್ರೆಸ್‌ ಕಳ್ಳಾಟ ಎಂದು ಲೇವಡಿ ಮಾಡಿದೆ.

ಇದನ್ನೂ ಓದಿ: ಸಿಎಂ ಹುದ್ದೆ ಮೇಲೆ ಕಣ್ಣು: ಸೇಫ್ ಕ್ಷೇತ್ರಗಳಿಗಾಗಿ ‘ತಲಾಶ್; ದೇವರಾಜ್ ಅರಸ್ ಕ್ಷೇತ್ರ ಹುಣಸೂರಿನಿಂದ ಸಿದ್ದರಾಮಯ್ಯ ಸ್ಪರ್ಧೆ!

ಸಿದ್ದರಾಮಯ್ಯ ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ. ಬಿಜೆಪಿಯವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಭ್ರಮೆ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಈ ಇಬ್ಬರು ನಾಯಕರಿಗೆ ಧೈರ್ಯವಿದ್ದರೆ, ಅವರ ಸಂಪರ್ಕಕ್ಕೆ ಬಂದ ಒಬ್ಬ ಬಿಜೆಪಿ ಶಾಸಕನ ಹೆಸರನ್ನು ಬಹಿರಂಗಪಡಿಸಲಿ ಎಂದು ಸವಾಲೆಸೆದಿದೆ.





Read more

[wpas_products keywords=”deal of the day”]