Karnataka news paper

ಜಿಲ್ಲಾ ಉಸ್ತುವಾರಿ ನೇಮಕ: ಕಲ್ಯಾಣ ಕರ್ನಾಟಕ ಭಾಗಕ್ಕೆ ಹೊರಗಿನವರ ನೇಮಕ ಕುರಿತು ಅಸಮಾಧಾನ


The New Indian Express

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಕೋವಿಡ್ ಉಸ್ತುವಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. 

ಆದರೆ ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಆ ಪ್ರದೇಶಗಳ ಸಚಿವರು ಇನ್ನೂ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪ್ರತಿನಿಧಿಸಿಲ್ಲ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್-19 ಮೇಲ್ವಿಚಾರಣೆ ಮತ್ತು ಪ್ರವಾಹ ಪರಿಹಾರದ ಉಸ್ತುವಾರಿ ವಹಿಸಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರಿಗೆ ಈಗ ಕಲಬುರಗಿ ಜಿಲ್ಲಾ ಉಸ್ತುವಾರಿ ನೀಡಲಾಗಿದೆ.

ಬೀದರ್ ಜಿಲ್ಲೆಯ ಪ್ರಭು ಚವ್ಹಾಣ ಅವರಿಗೆ ಯಾದಗಿರಿ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇಕೊಪ್ಪ ಅವರಿಗೆ ರಾಯಚೂರು ಮತ್ತು ಬೀದರ್ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಕೆಕೆಆರ್‌ಟಿಸಿ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ್ (ಇಬ್ಬರೂ ಕಲಬುರಗಿ ಜಿಲ್ಲೆಯವರು), ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ರಾಜಾ ನರಸಿಂಹ ನಾಯ್ಕ್ (ರಾಜುಗೌಡ) ಯಾದಗಿರಿ ಜಿಲ್ಲೆಯ ಮಾಜಿ ಸಚಿವ ಶಿವನಗೌಡ ನಾಯ್ಕ್ ರಾಯಚೂರು ಜಿಲ್ಲೆಯ ಉಸ್ತುವಾರಿಯ ಪ್ರಬಲ ಆಕಾಂಕ್ಷಿಗಳಾಗಿದ್ದರು.

ಇದನ್ನೂ ಓದಿ: ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಆರ್. ಅಶೋಕ್, ಮಾಧುಸ್ವಾಮಿಗಿಲ್ಲ ಉಸ್ತುವಾರಿ ಪಟ್ಟ

ಈ ಹಿಂದೆ ಕಲಬುರಗಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಈ ಭಾಗದ ಶಾಸಕರೊಬ್ಬರಿಗೆ ಅವಕಾಶ ಕಲ್ಪಿಸುವ ಬಗ್ಗೆ ಚಿಂತನೆ ನಡೆಸುವುದಾಗಿ ಭರವಸೆ ನೀಡಿದ್ದರು. ಸಿಎಂ ಬೊಮ್ಮಾಯಿ ಅವರು ಸಚಿವ ಸಂಪುಟ ವಿಸ್ತರಣೆಗೆ ಇನ್ನಷ್ಟು ಸಮಯ ತೆಗೆದುಕೊಳ್ಳಬಹುದು ಎಂಬುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವು ಸೂಚನೆಯಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ಡಾ.ಶರಣಪ್ರಕಾಶ ಪಾಟೀಲ್, ಬೇರೆ ಜಿಲ್ಲೆಯ ಸಚಿವರಿಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ನೀಡುವ ಮೂಲಕ ಬೊಮ್ಮಾಯಿ ಸರಕಾರ ಕಲಬುರಗಿ ಜನಪ್ರತಿನಿಧಿಗಳಿಗೆ ಸಚಿವ ಸ್ಥಾನ ನೀಡುವ ಕಾಳಜಿ ಇಲ್ಲ ಎಂಬುದನ್ನು ಸ್ಪಷ್ಟವಾಗಿ ತೋರಿಸಿದೆ.ಶಿಷ್ಟಾಚಾರದ ಪ್ರಕಾರ, ಗಣರಾಜ್ಯೋತ್ಸವದಂದು ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ಮಾಡಬೇಕು.

ಮುನೇಗೌಡ ಅವರು ರಾಯಚೂರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವುದರಿಂದ ಗೊಂದಲ ಉಂಟಾಗಿದೆ, ಆದರೆ ಅವರು ಒಂದು ಜಿಲ್ಲೆಯಲ್ಲಿ ಮಾತ್ರ ತ್ರಿವರ್ಣ ಧ್ವಜವನ್ನು ಹಾರಿಸಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ದೂರವಾಣಿ ಮೂಲಕ TNIE ಯೊಂದಿಗೆ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ, ಜಿಲ್ಲಾಡಳಿತವು ಈ ಕುರಿತು ಮಾರ್ಗಸೂಚಿಗಳಿಗಾಗಿ ಕಾಯುತ್ತಿದೆ ಎಂದು ಹೇಳಿದರು.





Read more

[wpas_products keywords=”deal of the day”]