The New Indian Express
ಬೆಂಗಳೂರು: ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ಸುಗಮಗೊಳಿಸುವ ಇ ಸಹಮತಿ ತಂತ್ರಾಂಶಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಸೋಮವಾರ ಚಾಲನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಹೊಸ ತಂತ್ರಾಂಶಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಯ ಶೈಕ್ಷಣಿಕ ದಾಖಲೆಗಳ ದೃಢೀಕರಣವನ್ನು ಪರಿಶೀಲಿಸಲು ಸಂಸ್ಥೆಗಳಿಗೆ ‘ಇ-ಸಹಮತಿ’ ಉಪಕ್ರಮವು ಸಹಾಯ ಮಾಡಲಿದೆ. ರಾಷ್ಟ್ರೀಯ ಶೈಕ್ಷಣಿಕ ಠೇವಣಿಯಲ್ಲಿ (NAD) ವಿದ್ಯಾರ್ಥಿಯ ಎಲ್ಲಾ ಪರೀಕ್ಷೆ-ಸಂಬಂಧಿತ ಮಾಹಿತಿಯನ್ನು ಒಟ್ಟುಗೂಡಿಸಲು ತಂತ್ರಾಂಶವು ಅನುಮತಿಸುತ್ತದೆ. ಇ-ಸಹಮತಿ’ ತಂತ್ರಾಂಶದ ಮೂಲಕ ಪರೀಕ್ಷೆಗೆ ಸಂಬಂಧಿಸಿದ ಡೇಟಾವನ್ನು ರಾಷ್ಟ್ರೀಯ ಶೈಕ್ಷಣಿಕ ಸಾಧನಾ ಭಂಡಾರಕ್ಕೆ (ನ್ಯಾಷನಲ್ ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್- ಎನ್ಎಬಿಸಿ) ಸೇರಿಸಲು ಹಾಗೂ ಉದ್ಯೋಗಧಾತರ ಜತೆಗೆ ಅಂಕಪಟ್ಟಿ ಹಂಚಿಕೊಳ್ಳಲು ಇದರಲ್ಲಿ ಅವಕಾಶ ನೀಡಲಾಗಿದೆ. ಇವೆಲ್ಲವೂ ಎನ್ಕ್ರಿಪ್ಟೆಡ್ ರೂಪದಲ್ಲಿ ಇರಲಿದ್ದು, ಪ್ರತೀ ಸೆಮಿಸ್ಟರಿನ ಅಂಕಪಟ್ಟಿಗಳನ್ನು ನೇರವಾಗಿ `ಡಿಜಿಲಾಕರ್-ಎನ್ಎಡಿ’ಗೆ ನೇರವಾಗಿ ವರ್ಗಾಯಿಸಬಹುದು. ಈ ಪ್ರಕ್ರಿಯೆಯಲ್ಲಿ ಭದ್ರತೆ ಮತ್ತು ಗೌಪ್ಯತೆಯನ್ನು ಕಾಯ್ದುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪ್ರತಿಭಟನೆ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾಗಿ: ಅತಿಥಿ ಉಪನ್ಯಾಸಕರಿಗೆ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್ ಮನವಿ
10 ಮಾಡ್ಯೂಲ್ ಗಳನ್ನು ಒಳಗೊಂಡಿರುವ ಈ ಯೋಜನೆಯಡಿ 2021ರ ಆಗಸ್ಟ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಕ್ರಮವಾಗಿ ಪ್ರವೇಶಾತಿ ಮತ್ತು ಶೈಕ್ಷಣಿಕ ಹಾಗೂ ತರಗತಿ ನಿರ್ವಹಣೆ ತಂತ್ರಾಂಶಗಳನ್ನು ಅಳವಡಿಸಲಾಗಿದೆ. ಉಳಿದೆಲ್ಲಾ ವ್ಯವಸ್ಥೆಯನ್ನು ಮುಂದಿನ ಜೂನ್ ಹೊತ್ತಿಗೆ ಅಳವಡಿಸಲಾಗುವುದು. ಇದರಿಂದ ವಿವಿಗಳು ಪರೀಕ್ಷೆ ನಡೆಸಲು ಮತ್ತು ಅಂಕಪಟ್ಟಿಗಳನ್ನು ನೀಡಲು ಖರ್ಚು ಮಾಡುತ್ತಿದ್ದ ರೂ.60 ಕೋಟಿ ಹಣ ಉಳಿತಾಯವಾಗಲಿದೆ. ಜೊತೆಗೆ, ನಕಲಿ ಅಂಕಪಟ್ಟಿ ಮತ್ತು ಪ್ರಮಾಣಪತ್ರಗಳ ದಂಧೆಗೂ ಕಡಿವಾಣ ಬೀಳಲಿದೆ. ಒಟ್ಟಾರೆ ಇದರಿಂದ ರಾಜ್ಯದ ಎಲ್ಲಾ ವಿವಿಗಲು ಮತ್ತು 3400 ಕಾಲೇಜುಗಳ 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇದರ ಪ್ರಯೋಜನವಾಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಎನ್‍ಇಪಿ ಆಶಯಗಳ ಅನುಷ್ಠಾನ: ಇನ್ಫೋಸಿಸ್ ಜೊತೆ ಶೀಘ್ರದಲ್ಲೇ 3 ಒಡಂಬಡಿಕೆ- ಸಚಿವ ಅಶ್ವತ್ಥ್ ನಾರಾಯಣ್
ಈ ತಂತ್ರಾಂಶದ ಮೂಲಕ ಪರೀಕ್ಷೆಗೆ ಸಂಬಂಧಿಸಿದ ಡೇಟಾವನ್ನು ರಾಷ್ಟ್ರೀಯ ಶೈಕ್ಷಣಿಕ ಸಾಧನಾ ಬಂಡಾರಕ್ಕೆ ಸೇರಿಸಲು ಹಾಗೂ ಉದ್ಯೋಗದಾತರ ಜತೆಗೆ ಅಂಕಪಟ್ಟಿ ಹಂಚಿಕೊಳ್ಳಲು ಇದರಲ್ಲಿ ಅವಕಾಶ ನೀಡಲಾಗಿದೆ. ಪ್ರತಿ ಸೆಮಿಸ್ಟರಿನ ಅಂಕಪಟ್ಟಿಗಳನ್ನು ನೇರವಾಗಿ ಡಿಜಿಲಾಕರ್-ಎನ್ಎಡಿಗೆ ವರ್ಗಾಯಿಸಬಹುದು. ಇದರಿಂದ ಭದ್ರತೆ ಮತ್ತು ಗೌಪ್ಯತೆಯನ್ನು ಕಾಯ್ದುಕೊಳ್ಳಲು ಸಾಧ್ಯವಾಗಲಿದೆ ಎಂದು ವಿವರಿಸಿದರು.
Read more
[wpas_products keywords=”deal of the day”]