Karnataka news paper

ಕೋವಿಡ್ ವಿರುದ್ಧ ಸಮರ್ಥವಾಗಿ ಹೋರಾಡಿದ್ದೇವೆ; ಥಾವರ್ ಚಂದ್ ಗೆಹ್ಲೋಟ್


ಹೈಲೈಟ್ಸ್‌:

  • ಕೋವಿಡ್ ವಿರುದ್ಧ ಸಮರ್ಥವಾಗಿ ಹೋರಾಡಿದ್ದೇವೆ
  • ಕೋವಿಡ್ ಪರಿಣಾಮವನ್ನು ತಗ್ಗಿಸಲು ಹಗಿರುಳು ಸರ್ಕಾರ ಶ್ರಮಿಸಿದೆ
  • ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯ

ಬೆಂಗಳೂರು: ಜಗತ್ತು ಕೋವಿಡ್ 19 ಸವಾಲುಗಳನ್ನು ನಿಭಾಯಿಸಲು ಹೆಣಗಾಡುತ್ತಿದ್ದಾಗ ನಾವು ಕೋವಿಡ್ 19 ವಿರುದ್ಧ ಅತ್ಯಂತ ಸಮರ್ಥವಾಗಿ ಹೋರಾಡಿದ್ದೇವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು. ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕೋವಿಡ್ ಪರಿಣಾಮವನ್ನು ತಗ್ಗಿಸಲು ಹಗಿರುಳು ಸರ್ಕಾರ ಶ್ರಮಿಸಿದೆ. ಜನತೆಯ ಸಹಕಾರದೊಂದಿಗೆ ಕೋವಿಡ್ ಪರಿಣಾಮವನ್ನು ಪರಿಣಾಮಕಾರಿಯಾಗಿ
ತಗ್ಗಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.

ರಾಜ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ಥಾವರ್ ಚಂದ್ ಗೆಹ್ಲೋಟ್‌

ಭಾರತವು ಎರಡು ಲಸಿಕೆಗಳನ್ನು ಉತ್ಪಾದಿಸಿರುವುದಲ್ಲದೆ ಈ ಲಸಿಕೆಯನ್ನು ಇತರ ದೇಶಗಳಿಗೂ ರಫ್ತು ಮಾಡುವಲ್ಲಿ ಯಶಸ್ವಿಯಾಗಿದೆ. ಲಸಿಕೆ ಹಂತ ಹಂತವಾಗಿ ಪ್ರತಿಯೊಬ್ಬರಿಗೆ ತಲುಪುವಂತೆ ನೋಡಿಕೊಳ್ಳಲು ನಾವು ಕೇಂದ್ರದೊಂದಿಗೆ ನಿಕಟ ಸಹಯೋಗದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಉಲ್ಲೇಖಿಸಿದರು. ಇದೇ ಸಂದರ್ಭದಲ್ಲಿ ಕೋವಿಡ್ ಸಂದರ್ಭದಲ್ಲಿ ಶ್ರಮಿಸಿದ ವೈದ್ಯರಿಗೆ, ನರ್ಸ್‌ಗಳಿಗೆ, ಪೊಲೀಸ್ ಸಿಬ್ಬಂದಿಗೆ ಹಾಗೂ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.

ಸರ್ಕಾರ ಕೃಷಿ ವಲಯದಲ್ಲಿ ಬದಲಾವಣೆಯನ್ನು ತರಲು ಜಲಾನಯನ ಅಭಿವೃದ್ದಿಗೆ ಕಡೆ ಗಮನ ಹರಿಸಿದೆ. 2021022 ನೇ ಸಾಲಿನಲ್ಲಿ 1472 ಕೋಟಿ ಮೊತ್ತದ ಜಲಾನಯನ ಅಭಿವೃದ್ದಿ ಕಾಮಗಾರಿಗಳಿಗೆ ಅನುಮೋದನೆ ನೀಡಿದೆ. ಮೊಬೈಲ್‌ ಮತ್ತು ತಂತ್ರಜ್ಞಾನ ಬೆಳೆ ಸಮೀಕ್ಷೆಯನ್ನುಅನುಷ್ಠಾನಗೊಳಿಸಲಾಗಿದ್ದು,12,7,868 ರೈತರು ನೋಂದಾಯಿಸಿಕೊಂಡಿದ್ದಾರೆ. 256.95 ಲಕ್ಷ ಪ್ರದೇಶವನ್ನು ಬೆಳೆ ಸಮೀಕ್ಷೆಯ ಅಡಿಯಲ್ಲಿ ತರಲಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು 4.41 ಕೋಟಿ ಮೊತ್ತವನ್ನು 16,176 ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಲಾಗಿದೆ. ಕರ್ನಾಟಕ ಸಹಕಾರಿ ಕ್ಷೇತ್ರದಲ್ಲಿನ ಹಾಲು ಉತ್ಪಾದನೆಯಲ್ಲಿ 2 ನೇ ಸ್ಥಾನ, ಮೊಟ್ಟೆ ಉತ್ಪದನೆಯಲ್ಲಿ ಆರನೇ ಸ್ಥಾನ ಪಡೆದುಕೊಂಡಿದೆ. ಪಶುಸಂಗೋಪನಾ ಇಲಾಖೆಯು ಕೃಷಿ ಜಿಡಿಪಿಗೆ 26.81 ರಷ್ಟು ಮತ್ತು ರಾಜ್ಯ ಜಿಡಿಪಿಗೆ 3.53 ರಷ್ಟು ಕೊಡುಗೆಯನ್ನು ನೀಡಿದೆ ಎಂದರು.



Read more

[wpas_products keywords=”deal of the day sale today offer all”]