Karnataka news paper

ತ್ರಿವರ್ಣ ಧ್ವಜಕ್ಕೆ ಅವಮಾನ: ಅಮೇಜಾನ್ ಅಧಿಕಾರಿಗಳು, ಮಾಲಿಕರ ವಿರುದ್ಧ ಎಫ್ಐಆರ್ ಗೆ ಮಧ್ಯ ಪ್ರದೇಶ ಸರ್ಕಾರ ಆದೇಶ


The New Indian Express

ಭೋಪಾಲ್: ತ್ರಿವರ್ಣ ಧ್ವಜಕ್ಕೆ ಅವಮಾನವೆಸಗಿದ ಪ್ರಕರಣದಲ್ಲಿ ಇ-ಕಾಮರ್ಸ್ ದೈತ್ಯ ಅಮೇಜಾನ್ ಹಾಗೂ ಅದರ ಮಾಲಿಕರ ವಿರುದ್ಧ ಮಧ್ಯಪ್ರದೇಶ ಸರ್ಕಾರ ಎಫ್ಐಆರ್ ದಾಖಲಿಸಿದೆ.

ಭಾರತದ ತ್ರಿವರ್ಣ ಧ್ವಜದ ಚಿತ್ರವನ್ನು ಮುದ್ರಿಸಿದ್ದ ಶೂ, ಬಟ್ಟೆಗಳು, ಕೀ ಚೈನ್, ಚಾಕೊಲೇಟ್ ಗಳು ಮುಂತಾದ ವಸ್ತುಗಳನ್ನು ಮಾರಾಟ ಮಾಡುವುದಕ್ಕಾಗಿ ವೇದಿಕೆ ಕಲ್ಪಿಸಿಕೊಟ್ಟಿದ್ದ ಅಮೇಜಾನ್ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇ-ಕಾಮರ್ಸ್ ಸಂಸ್ಥೆಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಲ್ಲಿನ ಗೃಹ ಸಚಿವ ನರೋತ್ತಮ್ ಮಿಶ್ರ ಹೇಳಿದ್ದಾರೆ.

ಇದನ್ನೂ ಓದಿ: ತ್ರಿವರ್ಣ ಧ್ವಜಕ್ಕೆ ಅಪಮಾನ; ಅಮೇಜಾನ್ ವಿರುದ್ಧ ಭುಗಿಲೆದ್ದ ಆಕ್ರೋಶ

ಅಮೇಜಾನ್ ನ ಈ ನಡೆಯ ವಿರುದ್ಧ ನೆಟ್ಟಿಗರೂ ಆಕ್ಷೇಪ ವ್ಯಕ್ತಪಡಿಸಿ #AmazonInsultsNationalFlag ಎಂಬ ಹ್ಯಾಷ್ ಟ್ಯಾಗ್ ಟ್ವಿಟರ್ ನಲ್ಲಿ ಟ್ರೆಂಡ್ ಆಗಿತ್ತು.

“ಅಮೇಜಾನ್ ನಲ್ಲಿ ನಡೆದಿರುವ ಘಟನೆ ರಾಷ್ಟ್ರೀಯ ಧ್ವಜ ಸಂಹಿತೆಯ ಉಲ್ಲಂಘನೆಯಾಗಿದೆ. ಅಮೇಜಾನ್ ಅಧಿಕಾರಿಗಳು ಹಾಗೂ ಮಾಲಿಕರ ವಿರುದ್ಧ ಎಫ್ಐಆರ್ ದಾಖಲಿಸುವುದಕ್ಕಾಗಿ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದೇನೆ” ಎಂದು ಮಿಶ್ರಾ ತಿಳಿಸಿದ್ದಾರೆ.



Read more

[wpas_products keywords=”deal of the day”]