Karnataka news paper

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 2.55 ಲಕ್ಷ ಹೊಸ ಕೇಸ್ ಪತ್ತೆ, 614 ಮಂದಿ ಸಾವು


ANI

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,55,874 ಹೊಸ ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 614 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,97,99,202ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,90,462ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,36,842ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,67,753 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,70,71,898ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 16,49,108 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 71,88,02,433 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಇದನ್ನೂ ಓದಿ: ಒಮಿಕ್ರಾನ್ ಕೊನೆಯ ರೂಪಾಂತರಿಯಲ್ಲ; ಇನ್ನೂ ರೂಪಾಂತರಿಗಳು ಬರಬಹುದು: ಡಬ್ಲ್ಯೂಎಚ್ಒ

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,62,92,09,308 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.



Read more

[wpas_products keywords=”deal of the day”]