ಹೈಲೈಟ್ಸ್:
- ಹೆಚ್ಚಾಗುತ್ತಿದೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು
- ಮೆಗಾ ಸ್ಟಾರ್ ಚಿರಂಜೀವಿಗೆ ತಗುಲಿದ ಕೊರೊನಾ ವೈರಸ್ ಸೋಂಕು
- ನಟ ಶ್ರೀಕಾಂತ್‌ಗೆ ಕೋವಿಡ್-19 ಪಾಸಿಟಿವ್
ಚಿರಂಜೀವಿಗೆ ಕೋವಿಡ್-19 ಪಾಸಿಟಿವ್
ತೆಲುಗಿನ ಮೆಗಾ ಸ್ಟಾರ್ ಚಿರಂಜೀವಿ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಚಿರಂಜೀವಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ‘’ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿದರೂ, ಕಳೆದ ರಾತ್ರಿ ನನಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ನನಗೆ ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದೆ. ಮನೆಯಲ್ಲೇ ನಾನು ಕ್ವಾರಂಟೈನ್ ಆಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ಆದಷ್ಟು ಬೇಗ ಗುಣಮುಖರಾಗಿ ನಿಮ್ಮೆಲ್ಲರ ಮುಂದೆ ಮತ್ತೆ ಹಾಜರಾಗುತ್ತೇನೆ’’ ಎಂದು ನಟ ಚಿರಂಜೀವಿ ಟ್ವೀಟ್ ಮಾಡಿದ್ದಾರೆ.
ನಟ ಶ್ರೀಕಾಂತ್ ಅವರಿಗೂ ಕೊರೊನಾ ಸೋಂಕು
ಕನ್ನಡ ಸಿನಿಮಾಗಳಲ್ಲೂ ಅಭಿನಯಿಸಿರುವ ತೆಲುಗಿನ ನಟ ಶ್ರೀಕಾಂತ್ ಅವರಿಗೂ ಕೊರೊನಾ ವೈರಸ್ ಸೋಂಕು ತಗುಲಿದೆ. ‘’ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ, ನನಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಕಳೆದ ಕೆಲವು ದಿನಗಳಿಂದ ನನಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿತ್ತು. ನನ್ನ ಜೊತೆ ಸಂಪರ್ಕಕ್ಕೆ ಬಂದವರಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದರೆ, ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’’ ಎಂದು ನಟ ಶ್ರೀಕಾಂತ್ ಟ್ವೀಟ್ ಮಾಡಿದ್ದಾರೆ.
‘ಆಚಾರ್ಯ’ ಪೋಸ್ಟ್ ಪೋನ್
‘ಆಚಾರ್ಯ’ ಚಿತ್ರವನ್ನು ಫೆಬ್ರವರಿ 4, 2022 ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಆದರೆ, ಕೋವಿಡ್ ಭೀತಿಯಿಂದಾಗಿ ಅನೇಕ ರಾಜ್ಯಗಳಲ್ಲಿ ನಿರ್ಬಂಧ ಹೇರಿರುವ ಕಾರಣ, ‘ಆಚಾರ್ಯ’ ಬಿಡುಗಡೆಯನ್ನು ಮುಂದಕ್ಕೆ ಹಾಕಲಾಗಿದೆ. ‘’ಪ್ಯಾಂಡೆಮಿಕ್‌ನಿಂದಾಗಿ ‘ಆಚಾರ್ಯ’ ಚಿತ್ರದ ಬಿಡುಗಡೆಯನ್ನು ಮುಂದಕ್ಕೆ ಹಾಕಲಾಗುತ್ತಿದೆ. ನೂತನ ಬಿಡುಗಡೆ ದಿನಾಂಕವನ್ನು ಸದ್ಯದಲ್ಲೇ ಘೋಷಿಸಲಾಗುತ್ತದೆ’’ ಎಂದು ನಿರ್ಮಾಣ ಸಂಸ್ಥೆ ‘ಕೊನಿಡೆಲಾ ಪ್ರೋ ಕಂಪನಿ’ ಟ್ವೀಟ್ ಮಾಡಿತ್ತು.
‘ಜೇಮ್ಸ್’ ಚಿತ್ರದಲ್ಲಿ ಅಭಿನಯಿಸಿದ್ದಾರೆ ಶ್ರೀಕಾಂತ್
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಕೊನೆಯ ಚಿತ್ರ ‘ಜೇಮ್ಸ್’. ಚೇತನ್ ಕುಮಾರ್ ನಿರ್ದೇಶನ ಮಾಡಿರುವ ‘ಜೇಮ್ಸ್’ ಚಿತ್ರದಲ್ಲಿ ತೆಲುಗು ನಟ ಶ್ರೀಕಾಂತ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ಜೇಮ್ಸ್’ ಸಿನಿಮಾ ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದೆ. ಮಾರ್ಚ್ 17 ರಂದು ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದು ‘ಜೇಮ್ಸ್’ ಚಿತ್ರವನ್ನು ತೆರೆಗೆ ತರಲು ಚಿತ್ರತಂಡ ತಯಾರಿ ನಡೆಸುತ್ತಿದೆ.
Read more
[wpas_products keywords=”deal of the day party wear dress for women stylish indian”]