The New Indian Express
ಕನ್ನಡದಲ್ಲಿ ‘ಸ್ತಬ್ಧ’ ಹೆಸರಿನ ಹೊಸ ಸಿನಿಮಾ ಒಂದು ಸೆಟ್ಟೇರಿದೆ. ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿದ್ದು ನಿರ್ದೇಶಕ ಲಾಲಿ ರಾಘವ್ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಸಿನಿಮಾದಲ್ಲಿ ನಟಿ ಹರ್ಷಿಕಾ ಪೂಣಚ್ಚ ಮತ್ತು ರಾಘವೇಂದ್ರ ರಾಜ್‌ಕುಮಾರ್ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಅಪ್ಪು ಅಗಲಿಕೆಯ ನಂತರ, ಕೊಂಚ
ಸಮಯ ತೆಗೆದುಕೊಂಡು ತಮ್ಮ ಸಿನಿಮಾ ಕೆಲಸಗಳಲ್ಲಿ ನಿರತರಾಗಿದ್ದಾರೆ. ಈಗ ಅವರು ‘ಸ್ತಬ್ಧ’ ಎನ್ನುವ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ವಿಶೇಷ ಎಂದರೆ ಈ ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್ ಅವರು ಅಪ್ಪನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಹರ್ಷಿಕಾ ಪೂಣಚ್ಚ ಅವರು ರಾಘವೇಂದ್ರ ರಾಜ್‌ಕುಮಾರ್ ಅವರ ಮಗಳ
ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಉಳಿದಂತೆ ಚಿತ್ರದಲ್ಲಿ ಪ್ರತಾಪ್ ಸಿಂಹ, ಪ್ರಶಾಂತ್ ಸಿದ್ದಿ, ಶ್ರುತಿ ರಾಜ್, ಬೇಬಿ ಅಂಕಿತ, ಚಿನ್ಮಯ್ ಮತ್ತು ಪ್ರಿಯಾಂಕಾ ಅವರು ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಪಿ. ವಿ. ಆರ್ ಸ್ವಾಮಿ ಛಾಯಾಗ್ರಹಣ, ಹಂಸಲೇಖ
ಅವರ ಸಾಹಿತ್ಯ, ಥ್ರಿಲ್ಲರ್ ಮಂಜು ಸಾಹಸ ಮಾಡುತ್ತಿದ್ದಾರೆ. “ಸ್ತಬ್ದ ಒಂದು ಸೈಕಲಾಜಿಕಲ್ ಥ್ರಿಲ್ಲರ್ ಮತ್ತು ಭ್ರಮೆಗಳೊಂದಿಗೆ ಸಾಗುವ ಕಥೆಯಾಗಿದೆ” ಎಂದು ನಿರ್ದೇಶಕ ಲಾಲಿ ಹೇಳುತ್ತಾರೆ.
Read more…
[wpas_products keywords=”party wear dress for women stylish indian”]