Online Desk
ಬೆಂಗಳೂರು: ರಾಜ್ಯಾದ್ಯಂತ ಓಮಿಕ್ರಾನ್ ಭೀತಿ ನಡುವೆಯೇ ಕೊರೋನಾ ಮೂರನೆ ಅಲೆಯ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 48,905 ಸೋಂಕು ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 36,54,413ಕ್ಕೆ ಏರಿಕೆಯಾಗಿದೆ.
ಕಳೆದ ಒಂದು ದಿನದಲ್ಲಿ 39 ಮಂದಿ ಕೊರೋನಾದಿಂದ ಸಾವಿಗೀಡಾಗಿದ್ದು ರಾಜ್ಯದಲ್ಲಿ ಸಾವಿನ ಸಂಖ್ಯೆ 38,705ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಬೆಂಗಳೂರು ಒಂದರಲ್ಲೇ 22,427 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 16,48,758ಕ್ಕೆ ಏರಿಕೆಯಾಗಿದ್ದು ಇನ್ನು ಸೋಂಕಿಗೆ 8 ಮಂದಿ ಬಲಿಯಾಗಿದ್ದಾರೆ.
ಇಂದು 41,699 ಮಂದಿ ಸೋಂಕಿತರು ಗುಣಮುಖರಾಗಿದ್ದು, ರಾಜ್ಯಾದ್ಯಂತ ಒಟ್ಟು 3,57,909 ಸಕ್ರಿಯ ಪ್ರಕರಣಗಳಿವೆ.
ಇಂದಿನ ಪ್ರಕರಣ ವರದಿ ಬಳಿಕ ರಾಜ್ಯದಲ್ಲಿನ ಸೋಂಕು ಸಕಾರಾತ್ಮಕ ದರ 22.51ಕ್ಕೆ ಏರಿಕೆಯಾಗಿದೆ.
ಇಂದಿನ 26/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/u8l8FYTsTO @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/X4QZhgg1Uj
— K’taka Health Dept (@DHFWKA) January 26, 2022
Read more
[wpas_products keywords=”deal of the day”]