Karnataka news paper

ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಒತ್ತು: ಸಚಿವ ಗೋಪಾಲಯ್ಯ


Online Desk

ಮಂಡ್ಯ: ಮಂಡ್ಯ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ತಗೆದುಕೊಂಡು ಜಿಲ್ಲೆಯ ಸಮಗ್ರ ಅಭಿವೃಧ್ದಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಜಿಲ್ಲಾ ಕ್ರೀಡಾಂಗಣದಲ್ಲಿಂದು ನಡೆದ 73 ನೇ ಗಣರಾಜ್ಯೋತ್ಸವ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳು ನನ್ನ ಮೇಲೆ ವಿಶ್ವಾಸವಿಟ್ಟು ಹಾಸನ ಮತ್ತು ಮಂಡ್ಯ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ್ದಾರೆ. ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಹೊಸ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದರು.

ಜಿಲ್ಲೆಯ ಕಬ್ಬು ಬೆಳೆಗಾರರ ಜೀವನಾಡಿಯಾಗಿರುವ ಎರಡು ಸಕ್ಕರೆ ಕಾರ್ಖಾನೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು  ಹೇಳಿದರು.

ಬಿಜೆಪಿ ಪಕ್ಷಕ್ಕೆ ಬಂದ ಮೇಲೆ ಸಚಿವನಾಗಿದ್ದೇನೆ.  ಪಕ್ಷ ಅನೇಕ ಸ್ಥಾನ ಮಾನ ನೀಡಿದೆ. ಪಕ್ಷದ ಹೈ ಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರಬೇಕು.ಆದರೆ ಮತ್ತೆ ಪಕ್ಷಾಂತರ ಕುರಿತಂತೆ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗೆ ಅವರೇ ಉತ್ತರ ಕೊಡಬೇಕು ಎಂದು ಸುದ್ದಿಗಾರರ ಪ್ರಶ್ನೆಗೆ ಸಚಿವ ಗೋಪಾಲಯ್ಯ ಉತ್ತರಿಸಿದರು. ಈ ಸಂದರ್ಭದಲ್ಲಿ ಸಂಸದೆ ಸುಮಲತಾ ಅಂಬರೀಶ್ ಇತರರು ಉಪಸ್ಥಿತರಿದ್ದರು.



Read more

[wpas_products keywords=”deal of the day”]