Online Desk
ನವದೆಹಲಿ; ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುವುದು ಗಂಭೀರವಾದ ದುರ್ನಡತೆ ಮಾತ್ರವಲ್ಲ, ಅದು ಅಪರಾಧವೂ ಹೌದು ಎಂದು ಸುಪ್ರೀಂಕೋರ್ಟ್ ಬುಧವಾರ ಹೇಳಿದೆ.
ಉತ್ತರ ಪ್ರದೇಶದ ಪ್ರಾಂತೀಯ ಸಶಸ್ತ್ರ ಪೊಲೀಸ್ (ಪಿಎಸಿ) ಪಡೆಯನ್ನು ಕರೆದೊಯ್ದ ಟ್ರಕ್‌ನ ಚಾಲಕನೊಬ್ಬ ಕುಡಿದು ವಾಹನ ಚಾಲನೆ ಮಾಡಿದ್ದ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಹಾಗೂ ಬಿ.ವಿ.ನಾಗರತ್ನಾ ಅವರಿದ್ದ ನ್ಯಾಯಪೀಠ ನಡೆಸಿತು.
ಈ ವೇಳೆ ‘ಮದ್ಯ ಕುಡಿದ ಯಾವ ವ್ಯಕ್ತಿಗೂ ವಾಹನ ಚಾಲನೆ ಮಾಡಲು ಅನುಮತಿ ನೀಡಬಾರದು. ಮದ್ಯ ಕುಡಿದು ವಾಹನ ಚಾಲನೆ ಮಾಡುವುದು ಹಾಗೂ ಆ ಮೂಲಕ ಇತರರ ಜೀವದೊಂದಿಗೆ ಚೆಲ್ಲಾಟವಾಗುವುದು ಗಂಭೀರವಾದ ದುರ್ನಡತೆ ಮತ್ತು ಅಪರಾಧ ಎಂದು ಹೇಳಿತು.
2000ದಲ್ಲಿ ಕುಂಭಮೇಳಕ್ಕೆ ಅಲಹಾಬಾದ್‌ನಿಂದ ಪೊಲೀಸ್ ಸಿಬ್ಬಂದಿಯನ್ನು ಕರೆದೊಯ್ಯುವಾಗ, ಕುಡಿದು ವಾಹನ ಚಾಲನೆ ಮಾಡಿದ್ದ ಎಂಬ ಆರೋಪ ಎದುರಿಸುತ್ತಿರುವ ಟ್ರಕ್ ಚಾಲಕನಿಗೆ ಕಡ್ಡಾಯ ನಿವೃತ್ತಿ ನೀಡಬೇಕು’ ಎಂದು ನ್ಯಾಯಪೀಠ ಆದೇಶಿಸಿತು.
Read more
[wpas_products keywords=”deal of the day”]