Karnataka news paper

ಬಿಜೆಪಿಯಲ್ಲಿ ಯಾವುದೇ ಬೆಳವಣಿಗೆ ನಡೆದಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ; ಬಿ.ಶ್ರೀರಾಮುಲು


ಬಳ್ಳಾರಿ:ಬಿಜೆಪಿ ಶಾಸಕರು ಕಾಂಗ್ರೆಸ್‌ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನುವುದು ಶುದ್ಧ ಸುಳ್ಳು. ಬಿಜೆಪಿಯಲ್ಲಿ ಸದ್ಯಕ್ಕೆ ಅಂತಹ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಪ್ರತಿಪಕ್ಷದವರು ಜನರಲ್ಲಿ ಗೊಂದಲ ಸೃಷ್ಟಿಸಲು ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಬಳಿಕ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದರು. ಬಿಜೆಪಿಯಲ್ಲಿ ಯಾವುದೇ ಬಿನ್ನಾಭಿಪ್ರಾಯಗಳಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ನೇಮಕಕ್ಕೆ ಸಂಬಂಧಿಸಿದಂತೆ ಕೆಲವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಸರಕಾರ ಹಾಗೂ ಪಕ್ಷದ ಮುಖಂಡರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನೇಮಕ ಮಾಡಿದ್ದಾರೆ. ಸರಕಾರದ ತೀರ್ಮಾನ, ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದರು.
ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತುಮಕೂರು ಅಭಿವೃದ್ಧಿಗೆ ಶ್ರಮಿಸುತ್ತೇನೆ: ಆರಗ ಜ್ಞಾನೇಂದ್ರ
ರಾಜ್ಯದಲ್ಲಿನ ಕಟ್ಟಡ ಕಾರ್ಮಿಕರಿಗೂ ಉಚಿತ ಬಸ್‌ ಪಾಸ್‌ ನೀಡುವ ಚಿಂತನೆಯಿದ್ದು, ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. 900 ಎಲೆಕ್ಟ್ರಿಕಲ್‌ ಬಸ್‌ಗಳನ್ನು ಖರೀದಿಸಲಾಗಿದ್ದು, ಹಂತ ಹಂತವಾಗಿ ಎಲ್ಲ ಕಡೆಗಳಲ್ಲೂ ವಿಸ್ತರಿಸಲಾಗುವುದು. ನಗರ, ಪಟ್ಟಣ ಹಾಗೂ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗುವುದು. ವಿದ್ಯಾರ್ಥಿಗಳು ಸಾರಿಗೆ ಸೌಲಭ್ಯದಿಂದ ವಂಚಿತರಾಗಬಾರದು ಎನ್ನುವ ಕಲ್ಪನೆ ಹೊಂದಿದ್ದೇವೆ. ನಾನಾ ಕಾರಣಗಳಿಂದ ನಷ್ಟ ಅನುಭಸುತ್ತಿರುವ ಸಾರಿಗೆ ಇಲಾಖೆಗೆ ಹೊಸ ಚೈತನ್ಯ ಮೂಡಿಸಲು ರಾಜ್ಯದ ನಾಲ್ಕು ನಿಗಮಗಳನ್ನು ಒಂದು ಮಾಡಬೇಕು ಎನ್ನುವ ಚಿಂತನೆ ನಡೆದಿದೆ. ಶ್ರೀನಿವಾಸ್‌ ಮೂರ್ತಿ ಅವರ ವರದಿ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸಿ.ಎಂ.ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಬಳ್ಳಾರಿಯನ್ನು ಬೆಂಗಳೂರು ಗ್ಲೋಬಲ್‌ ಸಿಟಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಕನಸಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ, ಇರುವ ಅವಧಿಯಲ್ಲಿ ಜಿಲ್ಲೆಯನ್ನು ರಾಜ್ಯದಲ್ಲೇ ಮಾದರಿಯನ್ನಾಗಿ ಮಾಡಲು ಪ್ರಯತ್ನಿಸಲಾಗುವುದು. ಬಳ್ಳಾರಿಗೆ ಸ್ಮಾರ್ಟ್‌ ಸಿಟಿ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ನಗರ ಶಾಸಕ ಜಿ.ಸೋಮಶೇಖರ್‌ ರೆಡ್ಡಿ, ಬುಡಾ ಅಧ್ಯಕ್ಷ ಪಿ.ಪಾಲನ್ನ, ರಾಜ್ಯ ಸಭಾ ಸದಸ್ಯ ನಾಸೀರ್‌ ಹುಸೇನ್‌, ಸಂಸದ ವೈ.ದೇವೇಂದ್ರಪ್ಪ, ಗ್ರಾಮೀಣ ಶಾಸಕ ಬಿ.ನಾಗೇಂದ್ರ ಇತರರಿದ್ದರು.



Read more

[wpas_products keywords=”deal of the day sale today offer all”]