ANI
ಬಸ್ತಾರ್: 73ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ಕಚೇರಿಗಳು ವಾರದಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿವೆ ಎಂದು ಬುಧವಾರ ಹೇಳಿದ್ದಾರೆ.
“ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ, ಛತ್ತೀಸ್‌ಗಢ ಸರ್ಕಾರವು ವಾರದಲ್ಲಿ ಐದು ದಿನ ಕೆಲಸ ನಿಯಮವನ್ನು ಜಾರಿಗೊಳಿಸುತ್ತಿದೆ. ಪಿಂಚಣಿ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆಯನ್ನು ಸಹ ಶೇಕಡಾ 10 ರಿಂದ ಶೇಕಡಾ 14 ಕ್ಕೆ ಹೆಚ್ಚಿಸಲಾಗುವುದು” ಎಂದು ಬಘೇಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇದನ್ನು ಓದಿ: ಗಣರಾಜ್ಯೋತ್ಸವ ಇತಿಹಾಸ ಮತ್ತು ಪ್ರಾಮುಖ್ಯತೆ ಏನು?
ವಸತಿ ಪ್ರದೇಶಗಳಲ್ಲಿ ಕೈಗೊಳ್ಳಲಾಗುತ್ತಿರುವ ಸಣ್ಣ ವಾಣಿಜ್ಯ ಚಟುವಟಿಕೆಗಳಿಗೆ ನ್ಯಾಯ ಒದಗಿಸುವ ಮಸೂದೆಯನ್ನು ರಾಜ್ಯ ಸರ್ಕಾರವು ಪರಿಚಯಿಸುತ್ತಿದೆ. ಇದು ಸಾವಿರಾರು ಸಣ್ಣ ಉದ್ಯಮಿಗಳಿಗೆ ಪ್ರಯೋಜನವಾಗಲಿದೆ ಎಂದು ಛತ್ತೀಸ್ ಗಢ ಸಿಎಂ ಹೇಳಿದ್ದಾರೆ.
ಇದೇ ವೇಳೆ ಮಹಿಳೆಯರ ಸುರಕ್ಷತೆಯನ್ನು ಬಲಪಡಿಸಲು ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸುರಕ್ಷತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.
Read more
[wpas_products keywords=”deal of the day”]