Karnataka news paper

‘ಕಡಲೂರ ಕಣ್ಮಣಿ’ ಸಿನಿಮಾ ಹಾಡು ರಿಲೀಸ್: ಈ ಚಿತ್ರದ ಟೈಟಲ್ ಹುಟ್ಟಿದ ಕಥೆಯೇ ಆಶ್ಚರ್ಯಕರ


ಹೈಲೈಟ್ಸ್‌:

  • ರಾಮ್ ಪ್ರಸನ್ನ ಹುಣಸೂರು ನಿರ್ದೇಶನದ ‘ಕಡಲೂರ ಕಣ್ಮಣಿ’ ಚಿತ್ರ
  • ‘ಎದೆಯೊಳಗೆ ಈ ಪ್ರೀತಿ ಶುರುವಾಯಿತು ನನಗೆ’ ಹಾಡು ರಿಲೀಸ್
  • ‘ಕಡಲೂರ ಕಣ್ಮಣಿ’ ಚಿತ್ರ ಶೂಟಿಂಗ್ ಮುಗಿದಿದೆ

ರಾಮ್ ಪ್ರಸನ್ನ ಹುಣಸೂರು ನಿರ್ದೇಶನದ ‘ಕಡಲೂರ ಕಣ್ಮಣಿ‘ ಚಿತ್ರಕ್ಕಾಗಿ ಮಧುರಾಮ್ ಅವರು ಬರೆದಿರುವ ‘ಎದೆಯೊಳಗೆ ಈ ಪ್ರೀತಿ ಶುರುವಾಯಿತು ನನಗೆ’ ಎಂಬ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಯಿತು.

ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ನಿರ್ದೇಶಕ
“ನನಗೆ ಹದಿನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟು. ಈ ಚಿತ್ರ ಆರಂಭವಾದ ಒಂದು ಪ್ರಸಂಗ ನಿಮ್ಮ ಮುಂದೆ ಹಂಚಿಕೊಳ್ಳುತ್ತೇನೆ. ಜೀವನದಲ್ಲಿ ನೊಂದ ನಾನು ಆತ್ಮಹತ್ಯೆ ಮಾಡಿಕೊಳ್ಳಲು ಸಮುದ್ರದ ಬಳಿ ಹೋಗುತ್ತಿದೆ. ಇನೇನು ಆತ್ಮಹತ್ಯೆ ಮಾಡಿಕೊಳ್ಳುವಷ್ಟರಲ್ಲಿ ಹಿಂದೆ ನನ್ನ ತಂದೆ-ತಾಯಿ ಕಂಡರು. ಆಗ ನಾನು ನನ್ನ ನಿರ್ಧಾರದಿಂದ ಹಿಂದೆ ಸರಿದೆ. ಈ ಸಿನಿಮಾದ ನಿರ್ಮಾಪಕರು ನನ್ನ ಸ್ನೇಹಿತರು. ಅವರೆಲ್ಲಾ ನನ್ನ ಪ್ರೋತ್ಸಹಕ್ಕೆ ನಿಂತರು. ಈ ಸಿನಿಮಾ ಆರಂಭವಾಯಿತು. ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಬಿರುಸಿನಿಂದ ಸಾಗಿದೆ” ಎಂದು ಹೇಳಿದ್ದಾರೆ ನಿರ್ದೇಶಕ ರಾಮ್ ಪ್ರಸನ್ನ ಹುಣಸೂರು.

ಮತ್ತೊಂದು ಚಿತ್ರಕ್ಕೆ ಒಂದಾದ ಶ್ರೀಮುರಳಿ, ಉಮಾಪತಿ ಶ್ರೀನಿವಾಸ್, ನಿರ್ದೇಶಕ ಮಹೇಶ್ ಕುಮಾರ್

ಹಾಡು ಕೊಡದಿದ್ದಕ್ಕೆ ತಾನೇ ಸಂಗೀತ ನೀಡಿದ ರಾಮ್ ಪ್ರಸನ್ನ ಹುಣಸೂರು
‘ಕಡಲೂರ ಕಣ್ಮಣಿ’ಯನ್ನು ನಾನು ವಜ್ರ ಎನ್ನುತ್ತೇನೆ. ಈ ಸಿನಿಮಾದ ಕೊನೆಯ ಇಪ್ಪತ್ತು ನಿಮಿಷ ಎಲ್ಲರ ಕಣ್ಣಲ್ಲೂ ನೀರು ತರಿಸುತ್ತದೆ. ಇದರ ಕಥೆ ಈಗಲೇ ಪೂರ್ತಿ ಹೇಳಲಾಗದು. ಚಿತ್ರಕ್ಕೆ ಸಂಗೀತ ನೀಡುವಂತೆ ಸಂಗೀತ ನಿರ್ದೇಶಕರೊಬ್ಬರನ್ನು ಕೇಳಲಾಗಿತ್ತು. ಆದರೆ ಅವರು ಆರು ತಿಂಗಳಾದರು ಒಂದು ಹಾಡು ಮಾಡಿ ಕೊಡಲಿಲ್ಲ. ಕೊನೆಗೆ ನಿರ್ಮಾಪಕರ ಒತ್ತಾಯಕ್ಕೆ ಮಣಿದು ನಾನೇ ಸಂಗೀತ ನಿರ್ದೇಶನ ಮಾಡಿದ್ದೇನೆ ಎಂದರು ನಿರ್ದೇಶಕ ರಾಮ್ ಪ್ರಸನ್ನ ಹುಣಸೂರು.

ಈ ಬಾರಿ ನಟ ಶ್ರೀಮುರಳಿ ಹುಟ್ಟುಹಬ್ಬ ಆಚರಣೆ ಇಲ್ಲ! ಈ ನಿರ್ಧಾರದ ಹಿಂದಿರುವ ಕಾರಣವೇನು?

ನಾಯಕ ಅರ್ಜುನ್ ಹೇಳಿದ್ದೇನು?
‘ನನಗೆ ನನ್ನ ‌ಸ್ನೇಹಿತನ ಮೂಲಕ ನಿರ್ದೇಶಕರು ಪರಿಚಯವಾದರು. ಸ್ವಲ್ಪ ಸಮಯ ಅವರೊಡನೆ ಮಾತನಾಡಿದೆ. ನೀವೆ ನಮ್ಮ ಸಿ‌ನಿಮಾ ಹೀರೋ ಎಂದರು. ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ಬಹುತೇಕ ನೀರಿನ ಪ್ರದೇಶದಲ್ಲಿ ಶೂಟಿಂಗ್ ನಡೆದಿದೆ. ನನಗೆ ಅವಕಾಶ ಕೊಟ್ಟಿದ್ದಕ್ಕೆ ನಿರ್ದೇಶಕ, ನಿರ್ಮಾಪಕರಿಗೆ ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ’ ಎಂದರು ನಾಯಕ‌ ಅರ್ಜುನ್.

ನಿರ್ಮಾಪಕರಾದ ವಿನೋದ್ ರಾಮ್ ಹೊಳೆನರಸೀಪುರ, ಕೊಳ ಶೈಲೇಶ್ ಆರ್ ಪೂಜಾರ್ , ಸಹ ನಿರ್ಮಾಪಕ ಬಸವರಾಜ ಗಚ್ಚಿ, ಹಾಡು ಬರೆದಿರುವ ಮಧುರಾಮ್, ಕಿರಣ್ ದೇವಲಾಪುರ ಹಾಗೂ ಛಾಯಾಗ್ರಾಹಕರಾದ ಮನೋಹರ್ ಹಾಗೂ ರವಿರಾಮ್ ಚಿತ್ರದ ಕುರಿತಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡರು. ಹೊನ್ನಾವರ, ಮಂಕಿ, ಮುರುಡೇಶ್ವರ ಕಡೆ ಶೂಟಿಂಗ್ ನಡೆದಿದೆ.



Read more

[wpas_products keywords=”deal of the day party wear dress for women stylish indian”]