The New Indian Express
ನವದೆಹಲಿ: ಪಶ್ಚಿಮ ಬಂಗಾಳ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಪದ್ಮ ಪ್ರಶಸ್ತಿಯನ್ನು ಸ್ವೀಕರಿಸುವುದಕ್ಕೆ ನಿರಾಕರಿಸಿದ ಬೆನ್ನಲ್ಲೇ ಪದ್ಮ ಪ್ರಶಸ್ತಿ ಪುರಸ್ಕೃತ ಮತ್ತೋರ್ವ ರಾಜಕಾರಣಿ, ಪಕ್ಷದ ಸಹೋದ್ಯೋಗಿಯಾಗಿರುವ ಗುಲಾಮ್ ನಬಿ ಆಜಾದ್ ವಿರುದ್ಧ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟೀಕಾ ಪ್ರಹಾರ ನಡೆಸಿದ್ದಾರೆ.
ಬುದ್ಧದೇವ್ ಭಟ್ಟಾಚಾರ್ಯ ಅವರು ಸರಿ ಇದ್ದಾರೆ. ಅವರು ಆಜಾದ್ ಆಗಿರಲು ಬಯಸುತ್ತಿದ್ದಾರೆ, ಗುಲಾಮ್ ಆಗಿರಲು ಬಯಸುತ್ತಿಲ್ಲ” ಎಂದು ಟ್ವೀಟ್ ನಲ್ಲಿ ಗುಲಾಮ್ ನಬಿ ಆಜಾದ್ ವಿರುದ್ಧ ವ್ಯಂಗ್ಯವಾಡಿದ್ದಾರೆ.
Right thing to do. He wants to be Azad not Ghulam. https://t.co/iMWF00S9Ib
— Jairam Ramesh (@Jairam_Ramesh) January 25, 2022
ಕಾಂಗ್ರೆಸ್ ನ ನಾಯಕತ್ವವನ್ನು ಪ್ರಶ್ನಿಸಿದ್ದ ಜಿ-23 ಗುಂಪಿನಲ್ಲಿ ಜಮ್ಮು-ಕಾಶ್ಮೀರದ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ಸಿಗ ಗುಲಾಮ್ ನಬಿ ಆಜಾದ್ ಸಹ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲದೇ ಪಕ್ಷದ ಸಂಘಟನೆ ಹಾದಿ ತಪ್ಪುತ್ತಿರುವುದರ ಬಗ್ಗೆ ಪ್ರಶ್ನಿಸಿದ್ದರು. ಅವರು ಕೇಂದ್ರ ಸರ್ಕಾರ ನೀಡಿರುವ ಈ ಬಾರಿಯ ಪದ್ಮ ಪ್ರಶಸ್ತಿಯನ್ನು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಜಾದ್ ವಿರುದ್ಧ ವ್ಯಂಗ್ಯ ಧಾಟಿಯಲ್ಲಿ ಟೀಕಾ ಪ್ರಹಾರ ನಡೆಸಿದ್ದಾರೆ.
ತಮಗೆ ನೀಡಲಾಗಿರುವ ಪದ್ಮ ಪ್ರಶಸ್ತಿಯನ್ನು ಸ್ವೀಕರಿಸುವುದಿಲ್ಲ ಎಂದು ಸಿಪಿಐ(ಎಂ) ನ ಹಿರಿಯ ನಾಯಕ, ಪಶ್ಚಿಮ ಬಂಗಾಳ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಪ್ರಶಸ್ತಿಯನ್ನು ತಿರಸ್ಕರಿಸಿದ್ದರು.
ನನಗೆ ಈ ಪ್ರಶಸ್ತಿಯ ಬಗ್ಗೆ ಏನೂ ತಿಳಿದಿಲ್ಲ. ಅದರ ಬಗ್ಗೆ ಯಾರೂ ಏನೂ ಹೇಳಿಲ್ಲ. ಅವರು ನನಗೆ ಪದ್ಮಭೂಷಣ ನೀಡಲು ನಿರ್ಧರಿಸಿದ್ದರೆ ಅದನ್ನು ಸ್ವೀಕರಿಸಲು ನಾನು ನಿರಾಕರಿಸುತ್ತೇನೆ ಎಂದು ಬುದ್ಧದೇವ್ ಭಟ್ಟಾಚಾರ್ಯ ಹೇಳಿಕೆಯೊಂದರಲ್ಲಿ ತಿಳಿಸಿದ್ದರು.
Read more
[wpas_products keywords=”deal of the day”]