The New Indian Express
ನವದೆಹಲಿ: 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ದೆಹಲಿಯ ಶಾಸ್ತ್ರಿ ಪಾರ್ಕ್ ನಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಬಂಧಿಸಲಾಗಿದೆ.
ಸಂತ್ರಸ್ತೆಯ ಆರೋಗ್ಯ ಸ್ಥಿತಿಯ ಬಗ್ಗೆ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದು, ಆಕೆಯ ಆರೋಗ್ಯ ಸ್ಥಿರವಾಗಿದೆ. ಆಸ್ಪತ್ರೆಯಲ್ಲಿ ಆಕೆ ಚಿಕಿತ್ಸೆ ಪಡೆಯುತ್ತಿದ್ದು ಜನರಲ್ ವಾರ್ಡ್ ಗೆ ವರ್ಗಾವಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದಕ್ಕೂ ಮುನ್ನ ಘಟನೆ ಬಗ್ಗೆ ಮಾತನಾಡಿದ್ದ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷ್ಯೆ ಸ್ವಾತಿ ಮಾಲಿವಾಲ್ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ತೀವ್ರ ಗಾಯಗಳಿಂದ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾಳೆ ಎಂದು ಹೇಳಿದ್ದರು.
ಅತ್ಯಾಚಾರವೆಸಗಿದ ಇಬ್ಬರೂ 10-12 ವಯಸ್ಸಿನವರಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ಮಧ್ಯಾಹ್ನ 2 ಗಂಟೆ ವೇಳೆಯಲ್ಲಿ ಬಾಲಕಿ ಮನೆಯ ಮುಂಭಾಗ ಆಟವಾಡುತ್ತಿದ್ದಳು ಅದೇ ಪ್ರದೇಶದಲ್ಲಿದ್ದ ಬಾಲಕನೋರ್ವ ಆಕೆಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಆತನ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರವೆಸಗಿದ್ದಾನೆ. ಬಾಲಕಿ ಸಂಜೆ 4:30 ಕ್ಕೆ ಮನೆಗೆ ಬಂದಿದ್ದು ಘಟನೆಯನ್ನು ಪೋಷಕರಿಗೆ ವಿವರಿಸಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅತ್ಯಾಚಾರವೆಸಗಿದವರ ವಿರುದ್ಧ ಅಪಹರಣ ಸೆಕ್ಷನ್ 363, 376 ಎಬಿ (ಲೈಂಗಿಕ ದೌರ್ಜನ್ಯ) ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಓರ್ವ ಆರೋಪಿಗೆ ತಂದೆ ಇಲ್ಲ, ಆತನ ತಾಯಿ ಬಿಹಾರದಲ್ಲಿದ್ದು, ದೆಹಲಿಯಲ್ಲಿ ಆತನ ಸಂಬಂಧಿಕರ ಮನೆಯಲ್ಲಿ ವಾಸವಿದ್ದಾನೆ.
Read more
[wpas_products keywords=”deal of the day”]