
ಹೌದು, ಫ್ಲಿಪ್‌ಕಾರ್ಟ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಎಲೆಕ್ಟ್ರಾನಿಕ್ಸ್ ಸೇಲ್ ಅನ್ನು ಆಯೋಜಿಸಿದೆ. ಈ ಸೇಲ್ ಈಗಾಗಲೇ ಲೈವ್ ಆಗಿದ್ದು ಜನವರಿ 31ರವರೆಗೆ ಮುಂದುವರೆಯಲಿದೆ. ಇನ್ನು ಈ ಸೇಲ್ ಸಮಯದಲ್ಲಿ, ಗ್ರಾಹಕರು ಎಕ್ಸ್‌ಚೇಂಜ್ ಆಫರ್ ಮತ್ತು ಬ್ಯಾಂಕ್ ಕಾರ್ಡ್ ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ನೋ ಕಾಸ್ಟ್ EMI ಆಯ್ಕೆಯನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್ ಎಲೆಕ್ಟ್ರಾನಿಕ್ಸ್ ಸೇಲ್‌ನಲ್ಲಿ ಯಾವೆಲ್ಲಾ ಆಫರ್ ಪಡೆದುಕೊಳ್ಳಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಫೋನ್ SE
ಫ್ಲಿಪ್‌ಕಾರ್ಟ್ ಎಲೆಕ್ಟ್ರಾನಿಕ್ಸ್ ಸೇಲ್‌ನಲ್ಲಿ ಐಫೋನ್ SE ಬಿಗ್ ಡಿಸ್ಕೌಂಟ್ ಪಡೆದುಕೊಂಡಿದೆ. ಇದನ್ನು ನೀವು ಕೇವಲ 27,999 ರೂ.ಗಳಿಗೆ ಖರೀದಿಸಬಹುದಾಗಿದೆ. ಇನ್ನು ಐಫೋನ್ SE 4.7 ಇಂಚಿನ ರೆಟಿನಾ ಎಚ್‌ಡಿ ಮಾದರಿಯ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ವೈಟ್ ಬ್ಯಾಲೆನ್ಸ್ ಹೊಂದಿಸಲು ಟ್ರೂ ಟೋನ್ ಟೆಕ್ ಹೊಂದಿದೆ. ಇದು A13 ಬಯೋನಿಕ್ ಪ್ರೊಸೆಸರ್ ಅನ್ನು ಹೊಂದಿದೆ.ಪ್ರೊಸೆಸರ್‌ಗೆ ಪೂರಕವಾಗಿ ಐಒಎಸ್ 13 ಬೆಂಬಲ ನೀಡಲಿದೆ. ಇದು 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ.ಜೊತೆಗೆ 7 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. 60kps ವರೆಗೆ 4 ಕೆ ವಿಡಿಯೋ ರೆಕಾರ್ಡಿಂಗ್ ಮತ್ತು ಫೋಟೋಗಳಿಗಾಗಿ ಸ್ಮಾರ್ಟ್ HDR ಆಯ್ಕೆ ಪಡೆದಿದೆ.

ಐಫೋನ್ 11
ಇನ್ನು ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಐಫೋನ್ 11 ಅನ್ನು 46,499ರೂ.ಗಳಿಗೆ ಖರೀದಿಸಬಹುದಾಗಿದೆ. ಜೊತೆಗೆ 18,850ರೂ ವರೆಗೆ ಎಕ್ಸ್‌ಚೇಂಜ್ ಆಫರ್ ಅನ್ನು ಸಹ ಪಡೆದುಕೊಳ್ಳಬಹುದಾಗಿದೆ. ಇನ್ನು ಐಫೋನ್ 11 ಫೋನ್ 1792 × 828-ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ 6.1 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ವೇಗದ ಚಿಪ್‌ಸೆಟ್ ಬೆಂಬಲದೊಂದಿಗೆ A13 ಬಯೋನಿಕ್ ಪ್ರೊಸೆಸರ್ ಪಡೆದುಕೊಂಡಿದ್ದು, ಈ ಬಯೋನಿಕ್ ಚಿಪ್ 8.5 ಬಿಲಿಯನ್ ಟ್ರಾನ್ಸಿಸ್ಟರ್‌ಗಳನ್ನು ಹೊಂದಿದೆ. ಈ ಐಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಎರಡು ಕ್ಯಾಮೆರಾಗಳು 12 ಮೆಗಾ ಪಿಕ್ಸಲ್ ಸೆನ್ಸಾರ್ ಬೆಂಬಲವನ್ನು ಪಡೆದಿವೆ. ಇದರೊಂದಿಗೆ ನೈಟ್‌ಮೋಡ್, 4K ವಿಡಿಯೊ, ಸ್ಲೋ ಮೋಶನ್ ಫೀಚರ್ಸ್‌ಗಳನ್ನು ಪಡೆದಿದೆ. ಇನ್ನು ಇದರ ಬ್ಯಾಟರಿ ಬ್ಯಾಕ್‌ಅಪ್ ಆಪಲ್ ಐಫೋನ್ ಎಕ್ಸ್‌ಆರ್ ಫೋನ್ ಗಿಂತ ಅಧಿಕವಾಗಿದೆ.

ಐಫೋನ್ 12
ಐಫೋನ್ 12 ಫ್ಲಿಪ್‌ಕಾರ್ಟ್ ಎಲೆಕ್ಟ್ರಾನಿಕ್ಸ್ ಸೇಲ್‌ನಲ್ಲಿ ಡಿಸ್ಕೌಂಟ್ ಪಡೆದಿರುವ ಮತ್ತೊಂದು ಐಫೋನ್ ಆಗಿದೆ. ಇದನ್ನು ನೀವು ರಿಯಾಯಿತಿ ದರದಲ್ಲಿ ಕೇವಲ 52,999 ರೂಗಳಿಗೆ ಖರೀದಿಸಬಹುದು. ಅಲ್ಲದೆ ಸಿಟಿ ಬ್ಯಾಂಕ್ ಕಾರ್ಡ್ ಮೂಲಕ 10% ಆಫರ್ ಅನ್ನು ಕೂಡ ಪಡೆದುಕೊಳ್ಳಬಹುದು. ಜೊತೆಗೆ 15,850 ರೂ.ವರೆಗಿನ ಎಕ್ಸ್‌ಚೇಂಜ್ ಆಫರ್ ಕೂಡ ಪಡೆಯಬಹುದು. ಇನ್ನು ಇನ್ನು ಆಪಲ್ ಐಫೋನ್ 12 OLED ಡಿಸ್‌ಪ್ಲೇ ಹೊಂದಿದೆ. ಇದು A14 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದ್ದು, 5G ನೆಟ್‌ವರ್ಕ್ ಅನ್ನು ಬೆಂಬಲಿಸಲಿದೆ. ಇನ್ನು ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ. ಇದರಲ್ಲಿ ನೈಟ್ ಮೋಡ್ ಆಯ್ಕೆ ಕೂಡ ನೀಡಲಾಗಿದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G
ಇದಲ್ಲದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್ ಕೂಡ ಫ್ಲಿಪ್‌ಕಾರ್ಟ್ ಎಲೆಕ್ಟ್ರಾನಿಕ್ಸ್ ಸೇಲ್ ಈವೆಂಟ್‌ನಲ್ಲಿ ಭಾರೀ ರಿಯಾಯಿತಿಯನ್ನು ಪಡೆದುಕೊಂಡಿದೆ. 20,999ರೂ.ಬೆಲೆಯ ಈ ಸ್ಮಾರ್ಟ್‌ಫೋನ್ ನಿಮಗೆ ಇದೀಗ 15,999ರೂ.ಗಳಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಮೇಲೆ ನಿಮಗೆ ಬರೋಬ್ಬರಿ 5,000ರೂ.ಗಳ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ಡ್ರಾಪ್-ಶೈಲಿಯ ನಾಚ್ ವಿನ್ಯಾಸ ಹೊಂದಿರಲಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ ಒನ್ ಯುಐ 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ.ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯನ್ನು ಒದಗಿಸಿದ್ದು, 15W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಲೈಟ್, ವೈಫೈ, ಬ್ಲೂಟೂತ್, ಜಿಪಿಎಸ್/ A-GPS, ಯುಎಸ್‌ಬಿ ಟೈಪ್-ಸಿ ಮತ್ತು 3.5mm ಹೆಡ್‌ಫೋನ್ ಅನ್ನು ಬೆಂಬಲಿಸಲಿದೆ.

ಮೊಟೊರೊಲಾ ಎಡ್ಜ್ 20 ಫ್ಯೂಷನ್ 5G
ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ ಎಡ್ಜ್ 20 ಫ್ಯೂಷನ್ 5G ಸ್ಮಾರ್ಟ್‌ಫೋನ್ ನಿಮಗೆ ಕೇವಲ 20,499ರೂ.ಗೆ ಮಾರಾಟವಾಗುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.7-ಇಂಚಿನ ಫುಲ್ ಹೆಚ್‌ಡಿ+ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಇದೆ, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೊಪವರ್ 30 ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5, ಅನ್ನು ಬೆಂಬಲಿಸಲಿದೆ.
Read more…
[wpas_products keywords=”smartphones under 15000 6gb ram”]