Karnataka news paper

ಕಾಂಗ್ರೆಸ್‌ನಲ್ಲಿ ಯಾರು ತಬ್ಬಲಿಯಾಗಿಲ್ಲ, ನಾವೆಲ್ಲಾ ಒಂದೇ: ಡಿಕೆ ಶಿವಕುಮಾರ್‌


ಬೆಂಗಳೂರು: ಕಾಂಗ್ರೆಸ್‌ ಪಕ್ಷಕ್ಕೆ ಬಿಜೆಪಿ ನಾಯಕರು ಸೇರ್ಪಡೆಯಾಗುತ್ತಾರೆ ಎಂಬ ವರದಿಗಳ ಬೆನ್ನಲ್ಲೇ ಕಾಂಗ್ರೆಸ್‌ ಜತೆ ಸಂಬಂಧ ಮುಗಿಯಿತು ಎಂದು ಸಿಎಂ ಇಬ್ರಾಹಿಂ ಹೇಳಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್‌ ಮತ್ತು ನನ್ನ ಸಂಬಂಧ ಮುಗಿದ ಅಧ್ಯಾಯ! ಸಿದ್ದರಾಮಯ್ಯ ತಬ್ಬಲಿಯಾದ್ರು ಎಂದ ಸಿಎಂ ಇಬ್ರಾಹಿಂ

‘ಇಬ್ರಾಹಿಂ ಅವರು ಹಿರಿಯ ನಾಯಕರು. ಕಾಂಗ್ರೆಸ್ ಸರಕಾರದಲ್ಲಿ ಮಂತ್ರಿಯಾಗಿದ್ದರು. ಸಿದ್ದರಾಮಯ್ಯ ಅವರ ಕಾಲದಲ್ಲಿ ಹಾಲಿ ಶಾಸಕರನ್ನು ಬಿಟ್ಟು ಅವರಿಗೆ ಟಿಕೆಟ್ ನೀಡಲಾಗಿತ್ತು. ಅವರು ಸೋತ ನಂತರವೂ ಅವರಿಗೆ ಸಂಪುಟ ಸ್ಥಾನಮಾನ ನೀಡಿ ಯೋಜನಾ ಆಯೋಗದ ಮುಖ್ಯಸ್ಥರನ್ನಾಗಿ ಮಾಡಲಾಗಿತ್ತು. ಸತತ ಎರಡು ಬಾರಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಅವರು ಪಕ್ಷದ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅಸಮಾಧಾನ ಇರುತ್ತದೆ ಹೀಗಾಗಿ ಅವರು ಮಾತನಾಡಿದ್ದಾರೆ. ಅವರು ನಮ್ಮ ಸ್ನೇಹಿತರು, ನಮಗೆ ಒಳ್ಳೆಯದು ಬಯಸಿದ್ದಾರೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಖಂಡಿತವಾಗಿಯೂ ಅವರ ಜತೆ ಮಾತನಾಡುತ್ತೇನೆ’ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದೆ ಎಂಬ ಇಬ್ರಾಹಿಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ‘ಅವರು ಕಾಂಗ್ರೆಸ್ ಪಕ್ಷದ ಸದಸ್ಯರು. ಪಕ್ಷ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದೆ. ಅವರು ನೋವಿನಿಂದ ಮಾತನಾಡಿದ್ದಾರೆ, ಅದನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು’ ಎಂದರು.

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರು ತಬ್ಬಲಿಯಾಗಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಪ್ರಶ್ನೆ ಕೇಳಿದಾಗ, ‘ಕಾಂಗ್ರೆಸ್‌ನಲ್ಲಿ ಇಬ್ರಾಹಿಂ, ನಾನು, ಸಿದ್ದರಾಮಯ್ಯ ಅವರು ಸೇರಿದಂತೆ ಯಾರೂ ತಬ್ಬಲಿಯಾಗಿಲ್ಲ. ನಾವೆಲ್ಲಾ ಒಂದೇ’ ಎಂದು ಪುನರುಚ್ಚರಿಸಿದರು.

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಸಚಿವ ಅಶ್ವತ್ಥ ನಾರಾಯಣ ಕಿಡಿ!

ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹೊತ್ತಲ್ಲಿ, ರೇಸ್ ಕೋರ್ಸ್ ನಲ್ಲಿ ಅಲ್ಟ್ರಾ ಡರ್ಬಿ ಬೆಂಗಳೂರು ರೇಸ್ ನಡೆಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ವಿಚಾರವಾಗಿ ನಾನು ಟ್ವೀಟ್ ಮಾಡಿದ್ದೇನೆ. ನಾವು ರಾಜ್ಯದ ಹಿತಕ್ಕಾಗಿ ಪಾದಯಾತ್ರೆ ಮಾಡಿದಾಗ ನಮ್ಮ ಮೇಲೆ ಕೇಸ್ ದಾಖಲಿಸಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು, ಪೊಲೀಸ್ ಮಹಾನಿರ್ದೇಶಕರು, ಗೃಹಮಂತ್ರಿಗಳು ಗಮನಹರಿಸಲಿ. ರಾಜ್ಯಾದ್ಯಂತ ಬಿಜೆಪಿ ನಾಯಕರು ಸಾಕಷ್ಟು ಬಾರಿ ನಿಯಮ ಉಲ್ಲಂಘಿಸಿದ್ದಾರೆ. ರೇಸ್ ಕೋರ್ಸ್ ಆಡಳಿತ ಮಂಡಳಿಯಲ್ಲಿ ಸರಕಾರದ ಅಧಿಕಾರಿಗಳು ಇದ್ದಾರೆ. ಇದರಲ್ಲಿ ಸರಕಾರದ ಪಾತ್ರವೂ ಇದೆ. ಸರಕಾರ ಯಾವ ರೀತಿ ಕ್ರಮ ಕೈಗೊಳ್ಳಲಿದೆ ಎಂದು ನೋಡಿಕೊಂಡು, ಈ ವಿಚಾರವಾಗಿ ಕೋರ್ಟ್ ಗೆ ಮಾಹಿತಿ ನೀಡಬೇಕೋ ಅಥವಾ ನಾವು ಏನು ಮಾಡಬಹುದು ಎಂಬುದನ್ನು ತೀರ್ಮಾನಿಸುತ್ತೇವೆ’ ಎಂದು ಡಿಕೆ ಶಿವಕುಮಾರ್‌ ಉತ್ತರಿಸಿದರು.



Read more

[wpas_products keywords=”deal of the day sale today offer all”]