Karnataka news paper

‘ಗ್ರಾಮ ಒನ್’ ಯೋಜನೆ ವ್ಯವಸ್ಥೆ ಮೇಲೆ ಜನರಿಗೆ ಮತ್ತೆ ನಂಬಿಕೆ ಬರುವಂತೆ ಮಾಡಲಿದೆ: ಸಿಎಂ ಬೊಮ್ಮಾಯಿ


The New Indian Express

ಬೆಂಗಳೂರು: ಜನರು ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡಿದ್ದು, ಗ್ರಾಮ ಒನ್ ಯೋಜನೆಯರು ಜನರ ನಂಬಿಕೆಯನ್ನು ಮರುಸ್ಥಾಪಿಸಲು ಸಹಾಯಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. 

ನಿನ್ನೆಯಷ್ಟೇ ಸಿಎಂ ಬೊಮ್ಮಾಯಿಯವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆನ್’ಲೈನ್ ಮೂಲಕ ರಾಜ್ಯದ 12 ಜಿಲ್ಲೆಗಳ 3026 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಒನ್ ಯೋಜನೆ ಅನುಷ್ಠಾನಕ್ಕೆ ಚಾಲನೆ ನೀಡಿದರು. 

ಬಳಿಕ ಮಾತನಾಡಿದ ಅವರು, ಯೋಜನೆಯನ್ನು ಮಾರ್ಚ್ ಅಂತ್ಯದೊಳಗೆ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು. 

ಗ್ರಾಮೀಣ ಭಾಗದಲ್ಲಿ ಒಂದೇ ಸೂರಿನಡಿ ಎಲ್ಲ ಸರ್ಕಾರಿ ಸೇವೆಗಳನ್ನು ಒದಗಿಸುವುದು ಗ್ರಾಮ ಒನ್ ಯೋಜನೆಯ ಉದ್ದೇಶವಾಗಿದ್ದು, ಈ ಯೋಜನೆಯನ್ನು ಪರಿಣಾಮಕಾರಿಯಾರಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಇದನ್ನೂ ಓದಿ: ಜನವರಿ 26ರಿಂದ ರಾಜ್ಯದ 12 ಜಿಲ್ಲೆಗಳಲ್ಲಿ ‘ಗ್ರಾಮ ಒನ್ ಯೋಜನೆ’ ಜಾರಿ

“ಜನರು ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡಿದ್ದು, ಉಪಕ್ರಮವು ಜನರ ನಂಬಿಕೆಯನ್ನು ಮರುಸ್ಥಾಪಿಸಲು ಅಧಿಕಾರಿಗಳು ಶ್ರಮಿಸಬೇಕು” ಎಂದು ತಿಳಿಸಿದರು.

ಮಾರ್ಚ್ ಅಂತ್ಯದೊಳಗೆ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ಯೋಜನೆಯನ್ನು ನಾನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತೇನೆ ಮತ್ತು ಯಶಸ್ವಿಯಾಗಲು ಪ್ರಯತ್ನಗಳನ್ನು ಮಾಡುತ್ತೇನೆ. ಇದರಂತೆ ನಿರ್ವಾಹಕರು, ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುತ್ತೇನೆ. ಈ ಕೇಂದ್ರಗಳನ್ನು ನಡೆಸುವವರಿಗೆ ತಾಂತ್ರಿಕ ಮತ್ತು ಕಾನೂನು ತರಬೇತಿ ನೀಡಲಾಗುವುದು. ವ್ಯವಸ್ಥೆಯ ಮೇಲ್ವಿಚಾರಣೆಗಾಗಿ ಪ್ರತಿ ತಹಶೀಲ್ದಾರ್ ಕಚೇರಿಯಲ್ಲಿ ನೋಡಲ್ ಅಧಿಕಾರಿಯನ್ನು ನಿಯೋಜಿಸಲಾಗುವುದು. ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳು ಇ-ಆಡಳಿತ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುತ್ತಾರೆಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಗ್ರಾಮ ಒನ್ ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

ಇದೊಂದು ದೊಡ್ಡ ಕ್ರಾಂತಿಯಾಗಲಿದೆ. ಜನರ ಮನೆ ಬಾಗಿಲಿಗೇ ಸೇವೆಗಳ ನೀಡುವುದು ಸರ್ಕಾರದ ಈ ಉಪಕ್ರಮದ ಮುಖ್ಯ ಉದ್ದೇಶವಾಗಿದೆ. ಇದು ಯಶಸ್ವಿಯಾದರೆ ಜನರಿಗೆ ವ್ಯವಸ್ಥೆಯ ಮೇಲೆ ನಂಬಿಕೆ ಮೂಡುತ್ತದೆ. ಇದು ಜನರ ಸಬಲೀಕರಣವಲ್ಲದೆ ಬೇರೇನೂ ಅಲ್ಲ, ಇದು ತಾಂತ್ರಿಕವಾಗಿ ಚಾಲಿತ ಉಪಕ್ರಮವಾಗಿದೆ. ತಹಶೀಲ್ದಾರ್ ಕಚೇರಿಯ ಹೊರಗೆ ಜನರು ವಿವಿಧ ಪ್ರಮಾಣಪತ್ರಗಳನ್ನು ಪಡೆಯಲು ಕಾಯುತ್ತಾ ನಿಲ್ಲುವುದನ್ನು ನಾವು ನೋಡಿದ್ದೇವೆ. ಇದು ಆಗಾಗ್ಗೆ ಮಧ್ಯವರ್ತಿಗಳ ಪ್ರಭಾವ ಮತ್ತು ಭ್ರಷ್ಟಾಚಾರಕ್ಕೆ ಕಾರಣವಾಗುತ್ತದೆ. ಗ್ರಾಮ ಒನ್ ಮೂಲಕ, ರಾಜ್ಯ ಸರ್ಕಾರವು ಈ ಕೇಂದ್ರಗಳಲ್ಲಿ ಆದಾಯ ತೆರಿಗೆ, ಜಾತಿ, ಪಿಂಚಣಿ ಮತ್ತು ಪಡಿತರ ಚೀಟಿ ಸೇರಿದಂತೆ ಅನೇಕ ಪ್ರಮಾಣಪತ್ರಗಳನ್ನು ಪಡೆಯಲು ಜನರಿಗೆ ಸಹಾಯ ಮಾಡುವ ಪ್ರಯತ್ನವನ್ನು ಮಾಡಿದೆ.

ಸರ್ಕಾರವು 100 ಸೇವೆಗಳನ್ನು ಪರಿಚಯಿಸಲು ಬಯಸುತ್ತದೆ ಮತ್ತು ಪ್ರಾರಂಭದಲ್ಲಿ ಸುಮಾರು 25 ಸೇವೆಗಳನ್ನು ಸೇರಿಸಲಾಗಿದೆ. “ಈ ಹಿಂದೆ, ನಾವು ನಾಲ್ಕು ಜಿಲ್ಲೆಗಳಲ್ಲಿ ಪ್ರಾಯೋಗಿಕ ಯೋಜನೆಯಾಗಿ ಉಪಕ್ರಮವನ್ನು ಪ್ರಾರಂಭಿಸಿದ್ದೆವು. ಅಲ್ಲಿ ಆರು ಲಕ್ಷಕ್ಕೂ ಹೆಚ್ಚು ಜನರು ಸೇವೆಗಳನ್ನು ಪಡೆದರು. ಈಗ ಅದನ್ನು 12 ಜಿಲ್ಲೆಗಳ 3,026 ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿಸಲಾಗಿದೆ ಎಂದು ಹೇಳಿದರು. 



Read more

[wpas_products keywords=”deal of the day”]