ANI
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಗುಂಪಿನ ಸಭೆ ಶುಕ್ರವಾರ ನಡೆಯಿತು.
ಕೋವಿಡ್ -19 ಸಂತ್ರಸ್ತರಿಗೆ ಪರಿಹಾರ ಪ್ಯಾಕೇಜ್, ಏರ್ ಇಂಡಿಯಾ ಹೂಡಿಕೆ, ಹಣದುಬ್ಬರ, ಚೀನಾದೊಂದಿಗಿನ ಗಡಿ ವಿವಾದ ಮತ್ತು ರೈತರಿಗೆ ಸಂಬಂಧಿಸಿದ ವಿಷಯಗಳನ್ನು ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಈ ವಿಚಾರಗಳಲ್ಲಿ ಇತರ ಸಮಾನ ಮನಸ್ಕ ಪಕ್ಷಗಳೊಂದಿಗೆ ಸಹಕರಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಈ ನಿರ್ಧಾರಗಳನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಬೆಂಬಲಿಸಿದ್ದಾರೆ. ಎ.ಕೆ. ಅಂಟೋನಿ, ಕೆ.ಸಿ. ವೇಣುಗೋಪಾಲ್, ಮಲ್ಲಿಕಾರ್ಜುನ್ ಖರ್ಗೆ, ಅಧಿರ್ ರಂಜನ್ ಚೌಧರಿ, ಆನಂದ್ ಶರ್ಮಾ, ಜೈರಾಮ್ ರಮೇಶ್, ಮನೀಶ್ ತಿವಾರಿ ಮತ್ತಿತರರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.
Read more
[wpas_products keywords=”deal of the day”]