ಉಕ್ರೇನ್‌ಗೆ ಸಂಬಂಧಿಸಿದಂತೆ ರಷ್ಯಾ ಮತ್ತು ಪಾಶ್ಚಿಮಾತ್ಯ ದೇಶಗಳ ನಡುವಿನ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಇತ್ತೀಚಿನ ಬೆಲೆ ಏರಿಕೆಗೆ ಪ್ರಮುಖ ಕೊಡುಗೆ ನೀಡಿವೆ. ರಷ್ಯಾವು ಉಕ್ರೇನ್ ಗಡಿಯಲ್ಲಿ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಿಯೋಜಿಸಿದ್ದು ಯುದ್ಧ ಸನ್ನಿವೇಶ ಸೃಷ್ಟಿಸಿದೆ. ಇದೇ ವೇಳೆ ಆಕ್ರಮಣ ಮಾಡಿದಲ್ಲಿ ಕಠಿಣ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ಅಮೆರಿಕ ಎಚ್ಚರಿಕೆಯನ್ನೂ ನೀಡಿದೆ. ರಷ್ಯಾ ಯುರೋಪ್‌ಗೆ ಅತೀ ಹೆಚ್ಚಿನ ಪ್ರಮಾಣದಲ್ಲಿ ನೈಸರ್ಗಿಕ ಅನಿಲ ಪೂರೈಸುವ ದೇಶವಾಗಿದ್ದು, ತೈಲ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಹೊಂದಿರುವ ಉತ್ಪಾದಕರ ಗುಂಪಿನಲ್ಲಿಯೂ ಇದ್ದು, ಉಕ್ರೇನ್ ಸಂಬಂಧಿಸಿದ ಬೆಳವಣಿಗೆ ಇಂಧನ ಮಾರುಕಟ್ಟೆಯ ಮೇಲೆ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರಲಿದೆ.
ಇನ್ನೊಂದು ಕಡೆ ಯೆಮೆನ್‌ನ ಹೌತಿ ಬಂಡುಕೋರರು ಮತ್ತು ಸೌದಿ ಅರೇಬಿಯಾ – ಯುಎಇ ನಡುವೆ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯೂ ಮಾರುಕಟ್ಟೆಯನ್ನು ಆತಂಕಕ್ಕೀಡು ಮಾಡಿದೆ. ಸೌದಿ ಅರೇಬಿಯಾ ಕೂಡ ಪ್ರಮುಖ ತೈಲ ರಫ್ತುದಾರ ದೇಶವಾಗಿರುವುದೇ ಇದಕ್ಕೆ ಕಾರಣ.
ರಷ್ಯಾ ಮತ್ತು ಸೌದಿ ಅರೇಬಿಯಾ ನೇತೃತ್ವದ ತೈಲ ಉತ್ಪಾದಕ ರಾಷ್ಟ್ರಗಳು ಉತ್ಪಾದನೆಯನ್ನೂ ನಿಯಂತ್ರಿಸುತ್ತಿದ್ದು, ಆರ್ಥಿಕ ಚೇತರಿಕೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೆಚ್ಚಿದ್ದರೂ ಪೂರೈಕೆ ಕಡಿಮೆಯಾಗಿರುವ ಕಾರಣ ಮಾರುಕಟ್ಟೆ ಬಿಗಿಯಾಗಿದೆ. ಕೆಲವು ದೇಶಗಳು ತಮ್ಮ ಉತ್ಪಾದನಾ ಕೋಟಾವನ್ನು ಪೂರೈಸಲೂ ಒದ್ದಾಡುತ್ತಿದ್ದು, ನಿರೀಕ್ಷಿತ ಪೂರೈಕೆಗಳಿಗಿಂತಲೂ ಕಡಿಮೆ ಪ್ರಮಾಣದಲ್ಲಿ ಕಚ್ಚಾ ತೈಲ ಪೂರೈಕೆಯಾಗುತ್ತಿದೆ.
ಇಂದಿನ ಪೆಟ್ರೋಲ್, ಡೀಸೆಲ್ ದರ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುರುವಾರ ಲೀಟರ್ ಪೆಟ್ರೋಲ್‌ಗೆ 100.58 ರೂ. ಹಾಗೂ ಲೀಟರ್ ಡೀಸೆಲ್‌ಗೆ 85.01 ರೂ. ದರವಿದೆ.
ವಾಣಿಜ್ಯ ಕ್ಷೇತ್ರದ 20 ಕ್ಕೂ ಹೆಚ್ಚು ವಲಯಗಳಿಗೆ ಸಂಬಂಧಿಸಿದ ಅತ್ಯುತ್ತಮ ಲೇಖನಗಳು ಮತ್ತು ಉದ್ಯಮಕ್ಕೆ ಸಂಬಂಧಿಸಿದ ಆಳವಾದ ಮಾಹಿತಿಗಾಗಿ ನೀವು ಎಕನಾಮಿಕ್ ಟೈಮ್ಸ್ ಓದಬಹುದು. ಮಾಹಿತಿಯುಕ್ತ ಲೇಖನಗಳನ್ನು ಓದಲು ಎಕನಾಮಿಕ್ ಟೈಮ್ಸ್ ಇಲ್ಲಿ ಕ್ಲಿಕ್ ಮಾಡಿ.
Read more…
[wpas_products keywords=”deal of the day”]