Karnataka news paper

ದೆಹಲಿ: ಮಹಿಳೆ ಮೇಲೆ ಗ್ಯಾಂಗ್ ರೇಪ್; ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ದುಷ್ಟರು; ವಿಡಿಯೋ!


Online Desk

ನವದೆಹಲಿ: ವೈಯಕ್ತಿಕ ದ್ವೇಷದ ಕಾರಣ ಮಹಿಳೆಯನ್ನು ಅಪಹರಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಟರು ಚಪ್ಪಲಿ ಹಾರ ಹಾಕಿ, ಮುಖಕ್ಕೆ ಕಪ್ಪು ಬಣ್ಣ ಬಳಿದು, ದೆಹಲಿಯ ಬೀದಿಗಳಲ್ಲಿ ಮೆರವಣಿಗೆ ಮಾಡಿದ ಘಟನೆ ಶಹದಾರ ಜಿಲ್ಲೆಯ ವಿವೇಕ್ ವಿಹಾರ್ ಪ್ರದೇಶದಲ್ಲಿ ನಡೆದಿದೆ.

ಯುವತಿಯ ಜೊತೆ ಅಮಾನವೀಯವಾಗಿ ನಡೆದುಕೊಂಡ ನಾಲ್ವರು ಆರೋಪಿಗಳನ್ನು ಬಂಧಿಸಿದ ದೆಹಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಡಿಸಿಡಬ್ಲ್ಯೂ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಪ್ರಕಾರ, ಕೆಲವು ಅಕ್ರಮ ಮದ್ಯ ಮಾರಾಟಗಾರರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಮತ್ತು ನಂತರ ಜನರ ಹರ್ಷೋದ್ಗಾರದ ನಡುವೆ ಆಕೆಯ ತಲೆಯನ್ನು ಬೋಳಿಸಿ, ಮುಖಕ್ಕೆ ಕಪ್ಪು ಬಣ್ಣ ಬಳಿದು ಮೆರವಣಿಗೆ ಮಾಡಲಾಯಿತು. ಪೊಲೀಸರ ಪ್ರಕಾರ, ಘಟನೆಯು ಆರೋಪಿಯೊಂದಿಗೆ ಮಹಿಳೆಯ ಮೇಲಿನ ವೈಯಕ್ತಿಕ ದ್ವೇಷದ ಕಾರಣ ಈ ರೀತಿಯಾಗಿ ನಡೆದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಹೇಳಿದರು.

ವರದಿಗಳ ಪ್ರಕಾರ, ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬದವರು ಹಲ್ಲೆ ನಡೆಸಿದ್ದಾರೆ. ಆತನ ಸಾವಿಗೆ ಮಹಿಳೆಯೇ ಕಾರಣ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಮಹಿಳೆಗೆ ಮದುವೆಯಾಗಿ ಒಂದು ಮಗುವಿದೆ.





Read more

[wpas_products keywords=”deal of the day”]