Karnataka news paper

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಭೆ; ತೆರವಾಗುತ್ತಾ 50-50 ರೂಲ್ಸ್?


ಬೆಂಗಳೂರು: ಕೋವಿಡ್‌ 50-50 ರೂಲ್ಸ್, ನೈಟ್‌ ಕರ್ಫ್ಯೂ ಮತ್ತಿತರ ನಿಯಮಾವಳಿಗಳ ತೆರವು ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶನಿವಾರ ಮಹತ್ವದ ಸಭೆ ನಡೆಯಲಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ.

ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಸಚಿವರಾದ ಆರ್‌. ಅಶೋಕ್, ಡಾ. ಆಶ್ವತ್ಥ ನಾರಾಯಣ ಹಾಗೂ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ ಪ್ರಮುಖರು ಭಾಗಿಯಾಗಲಿದ್ದಾರೆ.

ಓಮಿಕ್ರಾನ್ ಹೊಸ ಕೋವಿಡ್ ತಳಿ.. ಭಾರತಕ್ಕೆ ಇಷ್ಟೊಂದು ನಡುಕ ಹುಟ್ಟಿಸಿದ್ದೇಕೆ?

ರಾಜ್ಯದಲ್ಲಿ ಕೋವಿಡ್ ತಗ್ಗಿದ ಹಿನ್ನೆಲೆಯಲ್ಲಿ ಕೆಲವೊಂದು ನಿಯಮಾವಳಿಗೆಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಬೇಡಿಕೆಗಳು ಹೆಚ್ಚಾಗುತ್ತಿವೆ. ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಜಾರಿಯಲ್ಲಿರುವ 50-50 ರೂಲ್ಸ್ ಹಾಗೂ ರಾತ್ರಿ 11 ಗಂಟೆಯಿಂದ ಬೆಳಗ್ಗೆ ಐದು ಗಂಟೆಯವರೆಗೆ ಜಾರಿಯಲ್ಲಿರುವ ಕರ್ಫ್ಯೂವನ್ನು ತೆರವುಗೊಳಿಸುವ ನಿಟ್ಟಿನಲ್ಲೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕೋವಿಡ್ ನಿಯಮಾವಳಿಗಳನ್ನು ತೆರವು ಗೊಳಿಸಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿಗೆ ವರದಿ ನೀಡುವಂತೆ ಸಿಎಂ ಸೂಚನೆ ನೀಡಿದ್ದರು. ಅದರಂತೆ ತಾಂತ್ರಿಕ ಸಲಹಾ ಸಮಿತಿ ಶನಿವಾರ ಸಭೆಯಲ್ಲಿ ವರದಿ ನೀಡುವ ಸಾಧ್ಯತೆ ಇದೆ.

ಈ ವರದಿಯನ್ನು ಆಧರಿಸಿ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.



Read more

[wpas_products keywords=”deal of the day sale today offer all”]