Karnataka news paper

ಬೆಂಗಳೂರು: ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ


ಬೆಂಗಳೂರು: ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳಿಗೆ ನೇಮಕಗೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ತೋಟಗಾರಿಕೆ ಸಚಿವ ಮುನಿರತ್ನ ಶುಕ್ರವಾರ ವಿತರಿಸಿದರು.

ತೋಟಗಾರಿಕೆ ಇಲಾಖೆ ವತಿಯಿಂದ ಲಾಲ್‌ಬಾಗ್ ಉದ್ಯಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೇಮಕಾತಿ ಆದೇಶ ಪತ್ರಗಳ ವಿತರಣೆ ನಡೆಯಿತು.

‘ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವವರಿಗೆ ವೇತನದಲ್ಲಿ ವ್ಯತ್ಯಾಸ ಇರಲಿದೆ. ಕೌಟುಂಬಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು, ವರ್ಗಾವಣೆ ಕೋರಿ ಅರ್ಜಿಗಳನ್ನು ಬರೆಯಬೇಡಿ. ಸೇವೆ ಮಾಡಲು ಅವಕಾಶ ಸಿಗುವ ಸ್ಥಳದಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ. ರೈತರನ್ನು ಕಾಯಿಸದೆ, ಅವರ ಸಮಸ್ಯೆಗಳನ್ನು ಪರಿಹರಿಸಿ’ ಎಂದರು.

ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆ ನೂತನ ಕ್ಯಾಲೆಂಡರ್‌ ಅನ್ನು ಮುನಿರತ್ನ ಬಿಡುಗಡೆ ಮಾಡಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಕುಸುಮಾ ಹಾಗೂ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.



Read more from source

[wpas_products keywords=”deal of the day sale today kitchen”]