Karnataka news paper

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಅಭಿವೃದ್ಧಿ: ಸಿಎಂ ಬೊಮ್ಮಾಯಿ


Online Desk

ಬೆಂಗಳೂರು: ಬೆಂಗಳೂರು ನಗರವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ‌ ಕೊಂಡೊಯ್ಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಗರದ ಸಮಗ್ರ ಅಭಿವೃದ್ಧಿಗೆ ಆರು ಸಾವಿರ ಕೋಟಿ ರೂಪಾಯಿ ನೀಡಲಾಗಿದೆ. ಅಮೃತ ಯೋಜನೆಯಡಿ 75 ಸ್ಲಂ ಅಭಿವೃದ್ಧಿ ಮಾಡಲಾಗುತ್ತಿದೆ. ಬೆಂಗಳೂರನ್ನ ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುತ್ತೇವೆ. ಹೀಗಾಗಿ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷ  ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ ಮಾತನಾಡಿ,ಕರ್ನಾಟಕ ರಾಜ್ಯದಲ್ಲಿ 150 ಸ್ಥಾನ ಗೆದ್ದು ಬಿಜೆಪಿ ಮತ್ತೆ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಂತೆಯೇ ಬಸವರಾಜ ಬೊಮ್ಮಾಯಿಯವರ ಎಲ್ಲ ಅಭಿವೃದ್ಧಿಗೆ ಬಿಜೆಪಿ ಸದಾ ಬೆಂಬಲ ಕೊಡುತ್ತದೆ. ಬಿಜೆಪಿಗೆ 200 ಸ್ಥಾನ ಬರುತ್ತೆ ಎಂದು ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆಯೇ, ಕಾಂಗ್ರೆಸ್‌ನ ಅಂತ್ಯಯಾತ್ರೆ ಆಗಲಿದೆ ಎಂದು ಲೇವಡಿ ಮಾಡಿದರು.
 



Read more

[wpas_products keywords=”deal of the day”]