IANS
ಮೈಸೂರು: ಮೈಸೂರಿನ ಕೋಟೆ ಪಟ್ಟಣದ ಶಾಲೆಯ ತನ್ನ ಚೇಂಬರ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಕಿಸ್ ಮಾಡಿದ ಮುಖ್ಯೋಪಾಧ್ಯಾಯನನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
ಮುಖ್ಯೋಪಾಧ್ಯಾಯ ಆರ್.ಎಂ. ಅನಿಲ್‌ಕುಮಾರ್ ಅವರು ತಮ್ಮ ಚೇಂಬರ್‌ನಲ್ಲಿಯೇ ವಿದ್ಯಾರ್ಥಿನಿಗೆ ಚುಂಬಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನಂತರ ತುರ್ತು ಸಭೆ ಕರೆದ ಖಾಸಗಿ ಶಾಲೆಯ ಆಡಳಿತ ಮಂಡಳಿ ಮುಖ್ಯೋಪಾಧ್ಯಾಯನನ್ನು ಸೇವೆಯಿಂದ ವಜಾಗೊಳಿಸಲು ನಿರ್ಧರಿಸಿದೆ.
ಶಿಕ್ಷಣ ಇಲಾಖೆಯು ಮುಖ್ಯೋಪಾಧ್ಯಾಯರ ವಿರುದ್ಧ ಮಕ್ಕಳ ವಿರುದ್ಧದ ಲೈಂಗಿಕ ದೌರ್ಜನ್ಯ ತಡೆ(ಪೋಕ್ಸೊ) ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಇದನ್ನು ಓದಿ: ಮೈಸೂರು: ವಿದ್ಯಾರ್ಥಿನಿಯನ್ನು ಚುಂಬಿಸಿದ ಮುಖ್ಯೋಪಾಧ್ಯಾಯ; ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾಂತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರ ಅರಸ್ ಕೂಡ ಆರೋಪಿ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಮುಖ್ಯೋಪಾಧ್ಯಾಯ ತನ್ನ ಚೇಂಬರ್‌ನಲ್ಲಿ ವಿದ್ಯಾರ್ಥಿನಿಯನ್ನು ಹಿಡಿದುಕೊಂಡು ಚುಂಬಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಆರೋಪಿ ಮುಖ್ಯಶಿಕ್ಷಕರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ವಿಡಿಯೋವನ್ನು ವಿದ್ಯಾರ್ಥಿಗಳು ಕಿಟಕಿಯ ಮೂಲಕ ಚಿತ್ರೀಕರಿಸಿದ್ದಾರೆ.
Read more
[wpas_products keywords=”deal of the day”]