The New Indian Express
ಬೆಂಗಳೂರು: ಗುದದ್ವಾರದಲ್ಲಿಟ್ಟುಕೊಂಡು ಅಕ್ರಮವಾಗಿ ಚಿನ್ನವನ್ನು ಕಳ್ಳ ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನಿಂದ 23 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಶಾರ್ಜಾದಿಂದ ನಿನ್ನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನನ್ನು ಡಿಆರ್ ಐ ಮಾಹಿತಿ ಮೇರೆಗೆ ತಪಾಸಣೆ ನಡೆಸಿದಾಗ ಚಿನ್ನದ ಕಳ್ಳ ಸಾಗಣೆ ಪ್ರಕರಣ ಬೆಳಕಿಗೆ ಬಂದಿದೆ. ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಆತ ಗುದದ್ವಾರದಲ್ಲಿ ಮರೆ ಮಾಚಿ ಚಿನ್ನ ಕಳ್ಳ ಸಾಗಣಿಕೆ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ.
ಆರೋಪಿಯನ್ನು ಬಂಧಿಸಿರುವ ಅಧಿಕಾರಿಗಳು 482.26 ಗ್ರಾಂ ತೂಕದ 23,82,364 ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ.
A flyer who tried to smuggle 482.26 gms of gold worth Rs 23.8 lakh from Sharjah to B’luru in his rectum was caught by Air Intel Unit @BLRAirport Customs on Fri. They got a tip off from Dir of Rev Intell. Gold hid as paste in capsules @XpressBengaluru@NewIndianXpress@DGCAIndia pic.twitter.com/KQCxCEZInW
— S. Lalitha (@Lolita_TNIE) January 28, 2022
Read more
[wpas_products keywords=”deal of the day”]