Karnataka news paper

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ 13 ಕೋಟಿ ರೂ. ಪರಿಹಾರ ಬಿಡುಗಡೆ!


The New Indian Express

ಬೆಂಗಳೂರು: ಸಂತ್ರಸ್ತರ ಪರಿಹಾರ ಯೋಜನೆ ಅಡಿ ಅತ್ಯಾಚಾರಕ್ಕೆ ಒಳಗಾದ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಸಿಲುಕಿದ ಸಂತ್ರಸ್ತರಿಗೆ ನೀಡಬೇಕಿರುವ 20 ಕೋಟಿ ರೂ.ಗಳಲ್ಲಿ 13 ಕೋಟಿ ರೂ.ಗಳನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (ಕೆಎಸ್‍ಎಲ್‍ಎಸ್‍ಎ) ಬಿಡುಗಡೆ ಮಾಡಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‍ಗೆ ಮಾಹಿತಿ ನೀಡಿದೆ.

ಲೈಂಗಿಕ  ದೌರ್ಜನ್ಯಕ್ಕೆ ಸಿಲುಕಿದ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲು ಸೂಕ್ತ ಮಾರ್ಗಸೂಚಿ ರಚಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಪೀಪಲ್ಸ್ ಮೂವ್‍ಮೆಂಟ್ ಅಗೇನ    ಸ್ಟ್ ಸೆಕ್ಷ್ಯುಯಲ್ ಅಸಾಲ್ಟ್(ಪಿಎಂಎಎಸ್‍ಎ) ಎಂಬ ಮಹಿಳಾ ಸಂಘಟನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

ಇದನ್ನೂ ಓದಿ: ಫೆ.5ಕ್ಕೆ ಕಲಬುರಗಿ ಪಾಲಿಕೆ ಮೇಯರ್ ಚುನಾವಣೆ: ತಡೆ ಕೋರಿ ಹೈಕೋರ್ಟ್ ಮೊರೆ ಹೋಗಲು ಕಾಂಗ್ರೆಸ್ ನಿರ್ಧಾರ!

ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ರಾಜಶೇಖರ್ ವಾದ ಮಂಡಿಸಿ, ಸಂತ್ರಸ್ತರ ಪರಿಹಾರ ಯೋಜನೆ ಜಾರಿಗೆ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ 20 ಕೋಟಿ ರೂ. ಬಿಡುಗಡೆ ಮಾಡಲು 2020ರ ಮಾ.19ರಂದು ಹೈಕೋರ್ಟ್ ಆದೇಶಿಸಿತ್ತು. ಅದರಂತೆ, ಈವರೆಗೂ ಒಟ್ಟು 13 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಉಳಿದ 7 ಕೋಟಿ ರೂ. ಹಣವನ್ನು ಮನವಿ ಬಂದ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಕಾನೂನು ಸೇವೆಗಳ ಪ್ರಾಧಿಕಾರದ ಪರ ವಕೀಲರು, ಸರ್ಕಾರ ಬಿಡುಗಡೆ ಮಾಡಿರುವ ಹಣದಲ್ಲಿ ಸಂತ್ರಸ್ತೆಯರಿಗೆ ಎಷ್ಟು ಪರಿಹಾರ ವಿತರಿಸಲಾಗಿದೆ ಎಂಬ ವಿವರ ಒಳಗೊಂಡ ಮೆಮೋ ಸಲ್ಲಿಸಲಾಗಿದೆ. ಅಲ್ಲದೇ, 15 ಕೋಟಿ ರೂ. ಹಣ ಬಿಡುಗಡೆ ಕೋರಿ ಜ.10ರಂದು ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. 

ಇದನ್ನೂ ಓದಿ: ಅಂಗನವಾಡಿ ಕೇಂದ್ರಗಳ ಮಂಜೂರಾತಿ ಮಾಹಿತಿ ನೀಡಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಹೇಳಿಕೆ ದಾಖಲಿಸಿಕೊಂಡ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠವು, ಉಳಿದ 7 ಕೋಟಿ ರೂ.ಗಳನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ರಾಜ್ಯಕ್ಕೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.



Read more

[wpas_products keywords=”deal of the day”]