Karnataka news paper

ಕಾಂಗ್ರೆಸ್‌ನಲ್ಲಿ ಸ್ವಾರ್ಥದ ಹೋರಾಟ: ಬಿಜೆಪಿ ವ್ಯಂಗ್ಯ


ಬೆಂಗಳೂರು: ‘ಒಡೆದ ಮನೆ ಕಾಂಗ್ರೆಸ್ ಪಕ್ಷದಲ್ಲಿ ಸ್ವಾರ್ಥದ ಹೋರಾಟ ಆರಂಭಗೊಂಡಿದೆ’ ಎಂದು ಬಿಜೆಪಿ ಆರೋಪಿಸಿದೆ.

ಬೆಂಗಳೂರಿನ ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗಾಗಿ ಶಾಸಕ ಅಖಂಡ ಶ್ರೀನಿವಾಡ ಮೂರ್ತಿ, ಮಾಜಿ ಮೇಯರ್‌ ಸಂಪತ್‌ ರಾಜ್‌ ಅವರ ಬೆಂಬಲಿಗರ ಒತ್ತಡ, ರಾಜ್ಯದ ಬೇರೆ ಬೇರೆ ವಿಧಾನಸಭಾ ಕ್ಷೇತ್ರಗಳಲ್ಲಿ ಉಂಟಾಗುತ್ತಿರುವ ಗೊಂದಲದ ಕುರಿತು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಆಪ್ತರೊಂದಿಗೆ ಅತೃಪ್ತಿ ವ್ಯಕ್ತಪಡಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ಸುದ್ದಿಗೋಷ್ಠಿ ಆರಂಭಕ್ಕೂ ಮುನ್ನ ತಮ್ಮ ಆಪ್ತರೊಂದಿಗೆ ನಡೆಸಿರುವ ಸಂಭಾಷಣೆ ವಿಡಿಯೊ ಸದ್ಯ ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿದೆ.

ಈ ವಿಚಾರವಾಗಿ ಬಿಜೆಪಿಯು ಶನಿವಾರ ಕಾಂಗ್ರೆಸ್‌ ವಿರುದ್ಧ ಟೀಕೆ ಮಾಡಿದೆ.

‘ಪುಲಿಕೇಶಿ ನಗರದ ಅಖಂಡ ಶ್ರೀನಿವಾಸ್ ಮೂರ್ತಿ ಅವರ ನಿವಾಸಕ್ಕೆ ಬೆಂಕಿ ಹಚ್ಚಿದಾಗ ಮೌನಕ್ಕೆ ಶರಣಾಗಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ ಈಗ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಮಾತ್ರ ಎಲ್ಲಿಲ್ಲದ ಕಾಳಜಿ ಪ್ರದರ್ಶನ ಮಾಡುತ್ತಿದ್ದಾರೆ. ಒಡೆದ ಮನೆ ಕಾಂಗ್ರೆಸ್ ಪಕ್ಷದಲ್ಲಿ ಸ್ವಾರ್ಥದ ಹೋರಾಟ ಆರಂಭಗೊಂಡಿದೆ’ ಎಂದು ಗೇಲಿ ಮಾಡಿದೆ.



Read more from source

[wpas_products keywords=”deal of the day sale today kitchen”]