Karnataka news paper

ರಾಜ್ಯದಲ್ಲಿ ಆಶ್ರಯ ವಸತಿ ಯೋಜನೆಗೆ ಆದಾಯ ಮಿತಿ ಹೆಚ್ಚಿಸಲು ಕ್ರಮ: ಆರಗ ಜ್ಞಾನೇಂದ್ರ


The New Indian Express

ಬೆಂಗಳೂರು: ಆಶ್ರಯ ವಸತಿ ಯೋಜನೆಯ ವಾರ್ಷಿಕ ಆದಾಯ ಮಿತಿಯನ್ನು 32 ಸಾವಿರದಿಂದ 1.20 ಲಕ್ಷಕ್ಕೆ ಹೆಚ್ಚಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ವಸತಿ ಯೋಜನೆಯಡಿ ಮನೆ ಪಡೆಯಲು ಆದಾಯ ಮಿತಿ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಹಾಗೂ ವಸತಿ ಇಲಾಖೆ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ ಎಂದು ಹೇಳಿದರು. 

ಇದನ್ನೂ ಓದಿ: ಶಿವಮೊಗ್ಗ: ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಗೃಹ ಸಚಿವ

”ಯೋಜನೆಯಡಿ ಮನೆ ಪಡೆಯಲು ಆಕಾಂಕ್ಷಿಯಾಗಿರುವ ಅನೇಕ ಬಡವರು ಆದಾಯ ಮಿತಿಯನ್ನು ಹೆಚ್ಚಿಸುವಂತೆ ಒತ್ತಾಯಿಸುತ್ತಿದ್ದಾರೆ. ಇದನ್ನು ಸಿಎಂ ಗಮನಕ್ಕೆ ತಂದ ನಂತರ ಬದಲಾವಣೆ ಮಾಡಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ತಿಳಿಸಿದರು.

ಕೇಂದ್ರವು ಬಿಪಿಎಲ್ ಕುಟುಂಬಗಳ ಆದಾಯದ ಮಿತಿಯನ್ನು 1.20 ಲಕ್ಷ ರೂ.ಗೆ ಹೆಚ್ಚಿಸಿದೆ, ಆದರೆ 32,000 ರೂ.ಗಳ ಆದಾಯದ ಮಿತಿಯು ಯೋಜನೆಯಡಿ ಮನೆ ಪಡೆಯಲು ಅರ್ಹರಾಗಿರುವ ಅನೇಕರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದರು.



Read more

[wpas_products keywords=”deal of the day”]