ಈ ನಿಟ್ಟಿನಲ್ಲಿ ಪರಿಹಾರ ಸೂತ್ರವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಯಾರು ಮಾಡಿದ್ದು, ಹಿರಿಯ ಕಾಂಗ್ರೆಸ್ ಶಾಸಕ ಯು.ಟಿ ಖಾದರ್‌ಗೆ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಸ್ಥಾನ ನೀಡಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ನಾಯಕತ್ವದಲ್ಲಿ ಅಲ್ಪಸಂಖ್ಯಾತರ ಕಡಗಣನೆ; ಕೈ ಪಾಳಯದಲ್ಲಿ ಆಂತರಿಕ ಚರ್ಚೆ
ಕಾಂಗ್ರೆಸ್ ಮೂಲಗಳ ಪ್ರಕಾರ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಒಪ್ಪಿಗೆ ನೀಡಿ ಈಗಾಗಲೇ ಯು.ಟಿ ಖಾದರ್ ಅವರ ಹೆಸರನ್ನು ಹೈಕಮಾಂಡ್‌ಗೆ ಕಳುಹಿಸಿದ್ದು ಶೀಘ್ರದಲ್ಲೇ ಹೈಕಮಾಂಡ್‌ನಿಂದ ಅಂಕಿತ ಸಿಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಯು.ಟಿ ಖಾದರ್ ನಾಲ್ಕು ಬಾರಿ ಶಾಸಕರಾಗಿ ಕಾರ್ಯನಿರ್ವಹಣೆ ಮಾಡಿದ ಅನುಭವ ಇದೆ. ಅಲ್ಲದೆ ಸಿದ್ದರಾಮಯ್ಯ ಆಡಳಿತ ಅವಧಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾಗಿ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ವಸತಿ ಮತ್ತು ನಗರಾಭಿವೃದ್ದಿ ಇಲಾಖೆಯ ಸಚಿವರಾಗಿಯೂ ಕಾರ್ಯನಿರ್ವಹಣೆ ಮಾಡಿದ್ದಾರೆ. ಅಷ್ಟೇ ಲ್ಲದೆ ದಕ್ಷಿಣ ಕನ್ನಡ, ಕೋಲಾರ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಆಗಿಯೂ ಕಾರ್ಯನಿರ್ವಹಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಇತರ ಅಲ್ಪಸಂಖ್ಯಾತ ಶಾಸಕರಿಗೆ ಹೋಲಿಕೆ ಮಾಡಿದರೆ ಈ ಸ್ಥಾನವನ್ನು ನಿಭಾಯಿಸುವ ಸಾಮರ್ಥ್ಯ ಯು.ಟಿ ಖಾದರ್‌ಗೆ ಇದೆ. ಈ ನಿಟ್ಟಿನಲ್ಲಿ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಸ್ಥಾನವನ್ನು ಯು.ಟಿ ಖಾದರ್ ಅವರಿಗೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಯುತ್ತಿದ್ದು, ಶೀಘ್ರದಲ್ಲೇ ಹೈಕಮಾಂಡ್ ಘೋಷಣೆಯನ್ನು ಮಾಡಲಿದೆ. ಮೂಲಗಳ ಪ್ರಕಾರ ದೆಹಲಿಯಲ್ಲಿರುವ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಕೂಡಾ ಖಾದರ್ ಅವರಿಗೆ ಫೋನ್ ಕರೆ ಈ ಕುರಿತಾಗಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಸಿಎಂ ಇಬ್ರಾಹಿಂ ಅವರ ಬಂಡಾಯ ಕಾಂಗ್ರೆಸ್‌ಗೆ ತಲೆನೋವಾಗಿದೆ. ಬಹಿರಂಗವಾಗಿ ಅವರು ನೀಡುತ್ತಿರುವ ಹೇಳಿಕೆಗಳು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಅಲ್ಪಸಂಖ್ಯಾತರರನ್ನು ಕಾಂಗ್ರೆಸ್‌ನಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಆರೋಪವೂ ಕಾಂಗ್ರೆಸ್‌ನಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಆಗುತ್ತಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಸಿದ್ದರಾಮಯ್ಯ ಮತ್ತು ಡಿಕೆಶಿ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ವಿಧಾನಸಭೆಯಲ್ಲಿ ಪ್ರತಿಪಕ್ಷ ಉಪನಾಯಕ ಸ್ಥಾನ ಶಾಸಕ ಯು.ಟಿ ಖಾದರ್ ಅವರಿಗೆ ನೀಡುವ ಸಾಧ್ಯತೆಗಳು ದಟ್ಟವಾಗಿದೆ.
Read more
[wpas_products keywords=”deal of the day sale today offer all”]