Karnataka news paper

ಮೊಮ್ಮಗಳ ನಿಧನದಿಂದ ಶೋಕತಪ್ತರಾಗಿರುವ ಬಿಎಸ್‌ವೈಗೆ ಡಿ. ಕೆ. ಶಿವಕುಮಾರ್ ಸಾಂತ್ವನ


ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭಾನುವಾರ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಡಿ. ಕೆ. ಶಿವಕುಮಾರ್, ಯಡಿಯೂರಪ್ಪ ಅವರಿಗೆ ಸಾಂತ್ವನ ಹೇಳಿದರು.

ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಇತ್ತಿಚೆಗಷ್ಟೇ ಆತ್ಮಹತ್ಯೆಗೆ ಶರಣಾಗಿದ್ದರು. ಹೀಗಾಗಿ, ಶೋಕ ಸಾಗರದಲ್ಲಿ ಮುಳುಗಿರುವ ಯಡಿಯೂರಪ್ಪ ಅವರಿಗೆ, ಡಿಕೆಶಿ ಸಾಂತ್ವನ ಹೇಳಿದರು. ಯಡಿಯೂರಪ್ಪನವರ ಪುತ್ರ ಬಿ. ವೈ. ವಿಜಯೇಂದ್ರ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆತ್ಮಹತ್ಯೆಗೆ ಶರಣಾಗಿದ್ದ ಸೌಂದರ್ಯ

ಮಾಜಿ ಸಿಎಂ ಯಡಿಯೂರಪ್ಪ ಅವರ ಎರಡನೇ ಪುತ್ರಿ ಪದ್ಮಾವತಿ ಅವರ ಮಗಳಾದ ಸೌಂದರ್ಯ ಅವರು ಜನವರಿ 28 ಶುಕ್ರವಾರದಂದು ಆತ್ಮಹತ್ಯೆಗೆ ಶರಣಾಗಿದ್ದರು. ಬೆಂಗಳೂರು ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. 30 ವರ್ಷ ವಯಸ್ಸಿನ ಸೌಂದರ್ಯ ಅವರು ತಾವು ವಾಸವಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.

Breaking News: ಮಾಜಿ ಸಿಎಂ ಬಿಎಸ್‌ವೈ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ!
ಬೆಂಗಳೂರಿನ ವಸಂತ ನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಅವರು ವಾಸಿಸುತ್ತಿದ್ದರು. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯ ಅವರಿಗೆ 2018ರಲ್ಲಿ ವೈದ್ಯ ಡಾ. ನೀರಜ್‌ ಅವರ ಜೊತೆ ವಿವಾಹವಾಗಿತ್ತು. ದಂಪತಿ 9 ತಿಂಗಳ ಮಗು ಕೂಡಾ ಇದೆ.

ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಗೆ ಪ್ರಸವ ನಂತರದ ಖಿನ್ನತೆ ಕಾರಣ?
ಸೌಂದರ್ಯ ಅವರ ಪತಿ ಡಾ. ನೀರಜ್ ಅವರು ಜನವರಿ 28 ಶುಕ್ರವಾರದಂದು ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಗಂಡ ಕೆಲಸಕ್ಕೆ ಹೋದ ಬಳಿಕ ಸೌಂದರ್ಯ 10 ಗಂಟೆಯ ವೇಳೆಗೆ ತನ್ನ ಕೋಣೆಯನ್ನು ಲಾಕ್‌ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ. ನೀರಜ್‌ಗೆ ಕೆಲಸದವರು ಕರೆ ಮಾಡಿದ್ದರು. ಮನೆ ಕೆಲಸದವರು ಫೋನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು.

ಬಿಎಸ್‌ವೈಯನ್ನು ಭೇಟಿ ಮಾಡಿದ ಥಾವರ್ ಚಂದ್ ಗೆಹ್ಲೋಟ್; ಮೊಮ್ಮಗಳ ನಿಧನಕ್ಕೆ ಸಾಂತ್ವನ



Read more

[wpas_products keywords=”deal of the day sale today offer all”]