Online Desk
ಬೆಂಗಳೂರು: ಬಿಜೆಪಿ ಶಾಸಕರ ಕೆಲಸಗಳಿಗೆ ಸ್ಪಂದಿಸದೆ ಕನಿಷ್ಠಪಕ್ಷ ದೂರವಾಣಿ ಕರೆಗಳನ್ನು ಸ್ವೀಕರಿಸದ ಸುಮಾರು 15 ಕ್ಕೂ ಹೆಚ್ಚು ಸಚಿವರ ವಿರುದ್ಧ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ದೂರು ನೀಡಿದ್ದಾರೆ.
ಪಕ್ಷದ ಶಾಸಕರ ಮನವಿಗೆ ಸ್ಪಂದಿಸದ ಸಚಿವರ ವಿರುದ್ಧ ಈವರೆಗೆ ಮೌಖಿಕವಾಗಿ ಅಸಮಾಧಾನ ಹೊರಹಾಕುತ್ತಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಇದೀಗ ಲಿಖಿತ ಪಕ್ಷದ ನಾಯಕರಿಗೆ ಹಲವು ಸಚಿವರ ವಿರುದ್ದ ದೂರು ಸಲ್ಲಿಸಿದ್ದು, ಇದು ಮುಂದಿನ ದಿನಗಳಲ್ಲ ಗಂಭೀರ ಸ್ವರೂಪ ಪಡೆಯುವ ಲಕ್ಷಣ ಕಾಣುತ್ತಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿರುವ ಅವರು ಸಚಿವರ ಕಾರ್ಯವೈಖರಿ ವಿರುದ್ದ ಅಸಮಾಧಾನ ಹೊರ ಹಾಕಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಗೆ ಕೇವಲ 14 ತಿಂಗಳು ಬಾಕಿ ಉಳಿದಿದೆ. ಇಂಥಹ ಸಂದರ್ಭದಲ್ಲಿ ನಮ್ಮ ಪಕ್ಷದ ಸಚಿವರು ಯಾವುದೇ ಕೆಲಸಗಳಿಗೆ ಸ್ಪಂದಿಸುತ್ತಿಲ್ಲ ಮೊಬೈಲ್ ಕರೆ ಮಾಡಿದರೆ ಸ್ವೀಕರಿಸುವುದಿಲ್ಲ ಅಷ್ಟೇ ಅಲ್ಲ ಖುದ್ದಾಗಿ ಭೇಟಿಯಾಗಿ ಪತ್ರಗಳನ್ನು ಕೊಟ್ಟರೆ ಆಪ್ತ ಸಹಾಯಕರಿಂದ ಸಹಿ ಮಾಡಿಸಿ ಅಕಾರಿಗಳಿಗೆ ಕೊಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಮ್ಮ ಕ್ಷೇತ್ರದ ಯಾವುದೇ ಕೆಲಸಗಳು ಆಗುತ್ತಿಲ್ಲ. ನಾವು ಕ್ಷೇತ್ರಕ್ಕೆ ಸಂಬಂಧಿಸಿದ ಪತ್ರಗಳನ್ನು ನೀಡಿದರೂ ಸಚಿವರು ಪ್ರತಿಕ್ರಿಯೆಯನ್ನೂ ಕೊಡುವುದಿಲ್ಲ. ಕ್ಷೇತ್ರದಲ್ಲಿ ನಮ್ಮ ಕೆಲಸಗಳೇ ಆಗದಿದ್ದರೆ ನಾವು ಹೇಗೆ ಮುಖ ಹೊತ್ತು ತಿರಗಬೇಕೆಂದು ಪ್ರಶ್ನಿಸಿದ್ದಾರೆ. ಕೆಲವರಿಗೆ ನಮ್ಮಿಂದಲೇ ಸರ್ಕಾರ ಬಂದಿದೆ ಎಂಬ ಅಹಂ ಇದೆ. ಅವರು ತಮ್ಮ ವರ್ತನೆ ಸರಿಪಡಿಸಿಕೊಳ್ಳಬೇಕು. ಕನಿಷ್ಟ ಪಕ್ಷ ಪೋನ್ ಕಾಲ್ ರಿಸೀವ್ ಮಾಡಬೇಕು. ನಮ್ಮ ಕ್ಷೇತ್ರಗಳ ಕೆಲಸ ಮಾಡಿಕೊಡುವಂತೆ ಸಚಿವರಿಗೆ ಸೂಚನೆ ಕೊಡಬೇಕೆಂದು ಅವರು ಸಿಎಂ ಮತ್ತು ಪಕ್ಷದ ರಾಜ್ಯಾದ್ಯಕ್ಷರಿಗೆ ಮನವರಿಕೆ ಮಾಡಿದ್ದಾರೆ.
ಶಾಸಕರಿಗೆ ಸ್ವಂದನೆ ಸಿಗುತ್ತಿಲ್ಲ, ಕ್ಷೇತ್ರದ ಕೆಲಸ ಕಾರ್ಯಗಳು ನಡೆಯುತ್ತಿಲ್ಲ, ಶಾಸಕರು ಕೆಲಸ ಮಾಡಿಕೊಡಿ ಎಂದು ಕೇಳಿಕೊಂಡರೂ ಸ್ಪಂದಿಸುತ್ತಿಲ್ಲ. ಶಾಸಕರ ನಿರೀಕ್ಷೆ ಈಡೇರುತ್ತಿಲ್ಲ. ಈಗಿನ ಸರ್ಕಾರದಲ್ಲೂ ಕ್ಷೇತ್ರದ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂಬ ಅಸಮಾಧಾನವನ್ನು ಹೊರಹಾಕಿದ್ದಾರೆ. ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಲ್ಲ. ನಾವು ಕೂಡ ಜನರಿಂದಲೇ ಆರಿಸಬಂದವರು. ಕೆಲವು ಸಚಿವರು ಕೈಗೇ ಸಿಗೋದಿಲ್ಲ. ಅವರ ಪಿ.ಎಗಳು, ಪಿ.ಎಸ್‍ಗಳು ಪೋನ್ ರಿಸೀವ್ ಮಾಡುವುದಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
Read more
[wpas_products keywords=”deal of the day”]