Karnataka news paper

ಮುಂಬೈ- ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಕಾರು ಕಂಟೇನರ್ ಲಾರಿ ನಡುವೆ ಡಿಕ್ಕಿ, ಐವರು ದುರ್ಮರಣ


ANI

ಪುಣೆ:  ಮುಂಬೈ- ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಭಾನುವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪುಣೆಯಿಂದ 55 ಕಿಲೋ ಮೀಟರ್ ದೂರದಲ್ಲಿರುವ ಲೊನಾವಾಲಾದ ಶೀಲತ್ನೆ ಬಳಿ ಕಾರು ಮತ್ತು ಕಂಟೇನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ಮೃತ ದೇಹಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಅವರು ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಲೊನಾವಾಲಾ ಗ್ರಾಮಾಂತರ ಪೊಲೀಸರು ಹೇಳಿದ್ದಾರೆ. ಈ ಅಪಘಾತದಿಂದಾಗಿ ಮುಂಬೈ- ಪುಣೆ ಎಕ್ಸ್ ಪ್ರೆಸ್ ವೇ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಅಪಘಾತಕ್ಕೀಡಾದ ಕಾರು ಮುಂಬೈಯಿಂದ ಪುಣೆ ಕಡೆಗೆ ಹೋಗುತಿತ್ತು. ಕಾರ್ಲಾ ಪಾತ ದಾಟಿದ ನಂತರ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದಿದೆ. ಅತಿ ವೇಗದಿಂದಾಗಿ ಕಾರು ಡಿವೈಡರ್ ಜಂಪ್ ಮಾಡಿ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 





Read more

[wpas_products keywords=”deal of the day”]