Karnataka news paper

ವಾರಣಾಸಿ: ಮಧ್ಯರಾತ್ರಿಯಲ್ಲಿ ಮೋದಿ, ಯೋಗಿ ಆದಿತ್ಯನಾಥ್ ಪ್ರಮುಖ ಅಭಿವೃದ್ಧಿ ಕಾರ್ಯಗಳ ತಪಾಸಣೆ


Source : The New Indian Express

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ವಾರಣಾಸಿಯಲ್ಲಿದ್ದು ಹಲವು ಯೋಜನೆಗಳ ಉದ್ಘಾಟನೆ ಮಾಡಿದ್ದಾರೆ. 

ಡಿ.13 ರಂದು ಬೆಳಿಗ್ಗೆ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಉದ್ಘಾಟನೆ, ಸಂಜೆ ಗಂಗಾರತಿಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಧ್ಯರಾತ್ರಿ 1 ಗಂಟೆ ವೇಳೆಯಲ್ಲಿ ನಗರದ ಪ್ರಮುಖ ಅಭಿವೃದ್ಧಿ ಯೋಜನೆಗಳ ತಪಾಸಣೆಯನ್ನು ಕೈಗೊಂಡಿದ್ದಾರೆ. 

“ಕಾಶಿಯಲ್ಲಿನ ಪ್ರಮುಖ ಅಭಿವೃದ್ಧಿಕಾರ್ಯಗಳ ತಪಾಸಣೆ ನಡೆಸಲಾಗುತ್ತಿದೆ. ಈ ಪವಿತ್ರ ನಗರಕ್ಕೆ ಸಾಧ್ಯವಾದಷ್ಟು ಉತ್ತಮ ಮೂಲಸೌಕರ್ಯಗಳನ್ನು ರಚಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಮೋದಿ ಮಧ್ಯರಾತ್ರಿ 12:52 ರಲ್ಲಿ ತಮ್ಮ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದ್ದಾರೆ. 

ಮಧ್ಯರಾತ್ರಿಯ ತಪಾಸಣೆಗೆ ಪ್ರಧಾನಿ ಮೋದಿಗೆ ಸಿಎಂ ಯೋಗಿ ಆದಿತ್ಯನಾಥ್ ಸಾಥ್ ನೀಡಿದ್ದರು. ಈ ವೇಳೆ ಸ್ಥಳೀಯರೊಂದಿಗೆ ಸಂವಹನ ನಡೆಸಿ ತಮ್ಮನ್ನು ಸ್ವಾಗತಿಸುತ್ತಿದ್ದವರತ್ತ ಕೈ ಬೀಸುತ್ತಿದ್ದದ್ದು ಕಂಡುಬಂದಿತ್ತು.

ಇದೇ ವೇಳೆ ಪ್ರಧಾನಿ ಮೋದಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳೊಂದಿಗೆ ವಾರಣಾಸಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಭಾಗವಹಿಸಿದ್ದ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಈ ಬಗ್ಗೆ ಮಾಹಿತಿ ನೀದಿದ್ದು, ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಅವರ ಸಭೆ ಸತತ 6 ಗಂಟೆಗಳ ಕಾಲ ನಡೆಯಿತು ಎಂದು ಮಾಹಿತಿ ನೀಡಿದ್ದಾರೆ.





Read more